ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021
ಬಯೋಮೆಟ್ರಿಕ್‍ನಲ್ಲಿ ಹಾಜರಾತಿ ಹಾಕಿ, ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಆಸ್ಪತ್ರೆಯಿಂದ ಹೊರಗೆ ಹೋಗುತ್ತಾರೆ ಎಂಬ ಆರೋಪವಿತ್ತು. ಇದಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಜಿಯೋ ಫೆನ್ಸಿಂಗ್ ಅಳವಡಿಸಲು ನಿರ್ಧರಿಸಿದೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಜಿಯೋ ಫೆನ್ಸಿಂಗ್ ಅಳವಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು.
ಬಯೋಮೆಟ್ರಿಕ್ ಹಾಕಿ ವೈದ್ಯರು, ಸಿಬ್ಬಂದಿಗಳು ಹೊರಗೆ ಹೋಗುತ್ತಾರೆ ಎಂಬ ಆರೋಪವಿದೆ. ಜಿಯೋ ಫೆನ್ಸಿಂಗ್ ಅಳವಡಿಸಿದರೆ ನೂರು ಮೀಟರ್ ಅಥವಾ ಐವತ್ತು ಮೀಟರ್ ವ್ಯಾಪ್ತಿಯಲ್ಲಿ ವೈದ್ಯರು, ಸಿಬ್ಬಂದಿಗಳು ಎಷ್ಟು ಭಾರಿ ಹೊರಗೆ ಹೋಗಿದ್ದಾರೆ ಅನ್ನುವುದು ಗೊತ್ತಾಗಲಿದೆ. ಅವರ ಹಾಜರಾತಿಯೊಂದಿಗೆ ಅದನ್ನು ಹೋಲಿಕೆ ಮಾಡಿ ನೋಡಲಾಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]