ಶಿವಮೊಗ್ಗ ಜಿಲ್ಲೆಯಲ್ಲಿ ಹಸಿ ಶುಂಠಿ ಖರೀದಿ ಕೇಂದ್ರ ತೆರೆಯಲು ಸೂಚನೆ, ಮೀಟಿಂಗ್‌ನಲ್ಲಿ ಏನೆಲ್ಲ ಚರ್ಚೆಯಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಶುಂಠಿ (ginger) ಬೆಲೆ ಕುಸಿತದ ಹಿನ್ನೆಲೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ರೈತರಿಗೆ ನೆರವಾಗುತ್ತಿದೆ. ಪ್ರತಿ ಕ್ವಿಂಟಲ್‌ಗೆ 2,445 ರೂ.ನಂತೆ ರೈತರಿಂದ ಹಸಿಶುಂಠಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಸಿ ಶುಂಠಿ (ginger) ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತು ಚರ್ಚಿಸಲು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಸೊರಬ, ಸಾಗರ, ಶಿಕಾರಿಪುರ, ಹೊಸನಗರ, ತೀರ್ಥಹಳ್ಳಿಯಲ್ಲಿ ಶುಂಠಿ ಬೆಳೆಯಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ರೈತರಿಗೆ ಅನುಕೂಲವಾಗುವ ಸ್ಥಳದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿದೆ ಮೀಟಿಂಗ್‌ನ ಹೈಲೈಟ್‌ ಪಾಯಿಂಟ್‌

» ಯೋಜನೆಯ ಮಾರ್ಗಸೂಚಿಯನ್ವಯ ಮೈಸೂರು, ಹಾಸನ, ಹಾವೇರಿ, ಶಿವಮೊಗ್ಗ, ಬೀದರ್, ಚಿಕ್ಕಮಗಳೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ರೈತರಿಂದ ಗರಿಷ್ಟ 59,948 ಟನ್ ಎಫ್‌ಎಕ್ಯು ಗುಣಮಟ್ಟದ ಹಸಿಶುಂಠಿ (ginger) ಖರೀದಿಸಲಾಗುವುದು.

dc meeting about ginger

» ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವನ್ನು ಖರೀದಿ ಸಂಸ್ಥೆಯನ್ನಾಗಿ ನೇಮಕ ಮಾಡಲಾಗಿದೆ.

» ರೈತರ ನೋಂದಣಿ ಕಾರ್ಯದ ಜೊತೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಎಕರೆಗೆ 30 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಟ 60 ಕ್ವಿಂಟಲ್ ಪ್ರಮಾಣದ ಎಫ್‌ಎಕ್ಯು ಗುಣಮಟ್ಟದ ಹಸಿಶುಂಠಿ ಖರೀದಿಸಲಾಗುವುದು. ಈ ಕೂಡಲೇ ರೈತರು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು.

» ಕೇಂದ್ರ ಸರ್ಕಾರ ಕ್ವಿಂಟಲ್‌ ಶುಂಠಿಗೆ ಗರಿಷ್ಟ 611.25 ರೂ. ನಿರ್ವಹಣಾ ವೆಚ್ಚ ನಿಗದಿಪಡಿಸಿದೆ. ಈ ಮಿತಿಗೊಳಪಟ್ಟು ನಿರ್ವಹಣಾ ವೆಚ್ಚದಲ್ಲಿಯೇ ಕೈಗೊಳ್ಳಬೇಕು.

» ಹಸಿಶುಂಠಿ ಶೇಖರಣೆ ಮಾಡಲು ಆಯಾ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಲಭ್ಯವಿರುವ ಶೀತಲಗೃಹವನ್ನು ಪರಿಶೀಲಿಸಿ ಖರೀದಿ ಪೂರ್ವದಲ್ಲಿಯೇ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು.

» ಎಫ್‌ಎಕ್ಯು ಗುಣಮಟ್ಟ ಖಾತ್ರಿಪಡಿಸಲು ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಾಂಬಾರ ಪದಾರ್ಥಗಳ ಮಂಡಳಿಯ ಅಧಿಕಾರಿಗಳನ್ನು ನಿಯೋಜಿಸಿ ಎಫ್‌ಎಕ್ಯು ಗುಣಮಟ್ಟ ದೃಢೀಕರಿಸಿಕೊಳ್ಳಬೇಕು.

» ಹಸಿ ಶುಂಠಿ ಖರೀದಿ ಪೂರ್ವದಲ್ಲಿ, ಪಹಣಿಯಲ್ಲಿ 2024-25ನೇ ಸಾಲಿಗೆ ಬೆಳೆ ಸಮೀಕ್ಷೆ ದೃಢೀಕರಿಸಿ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಕೈಗೊಳ್ಳಬೇಕು. ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಉತ್ಪನ್ನದ ಮೊತ್ತವು ಡಿಬಿಟಿ/ಎನ್‌ಇಎಫ್‌ಟಿ/ಆರ್‌ಟಿಜಿಎಸ್ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು.

ಎಪಿಎಂಸಿ ಹೆಚ್ಚುವರಿ ನಿರ್ದೇಶಕ ಎಚ್.ವೈ.ಸತೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ, ಕೃಷಿ ಇಲಾಖೆ, ಸಹಕಾರ ಇಲಾಖೆ, ಸಹಕಾರ ಮಾರಾಟ ಮಹಾಮಂಡಳದ ಅಧಿಕಾರಿಗಳು ಉಪಸ್ಥಿತರಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment