ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ (Gold Chain) ಕಳ್ಳತನವಾಗಿದೆ ಎಂದು ಚಿತ್ರದುರ್ಗದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಚಿತ್ರದುರ್ಗದ ಪಾರ್ವತಮ್ಮ ಮತ್ತು ಅವರ ಸೊಸೆ ಜೂನ್ 7ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಲ್ಲಿನ ಕಾಲೇಜಿನಲ್ಲಿ ಓದುತ್ತಿರುವ ತಮ್ಮ ಪುತ್ರಿಯನ್ನು ಮಾತನಾಡಿಸಿ ಊರಿಗೆ ಹಿಂತಿರುಗುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಬಂದಾಗ ಪಾರ್ವತಮ್ಮ ಮತ್ತು ಅವರ ಸೊಸೆ ಶೌಚಾಲಯಕ್ಕೆ ತೆರಳಿದ್ದರು. ತಮ್ಮ ವ್ಯಾನಿಟಿ ಬ್ಯಾಗ್ ಅನ್ನು ಹೊರಗೆ ಇಟ್ಟು ಹೋಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪಾರ್ವತಮ್ಮ ಮತ್ತು ಅವರ ಸೊಸೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಚಿತ್ರದುರ್ಗದ ತಮ್ಮೂರಿಗೆ ಹಿಂತಿರುಗಿದ್ದರು. ರಾತ್ರಿ ಮನೆಯಲ್ಲಿ ವ್ಯಾನಿಟಿ ಬ್ಯಾಗ್ ತೆಗೆದಾಗ ಅದೊರಳಗಿದ್ದ ಪರ್ಸ್ ಇರಲಿಲ್ಲ. ಆ ಪರ್ಸ್‌ನಲ್ಲಿ 20 ಗ್ರಾಂ ತೂಕದ ಚಿನ್ನದ ಚೈನ್ ಇತ್ತು. ಇದರ ಮೌಲ್ಯ 70 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ತಾವು ಶೌಚಾಲಯಕ್ಕೆ ತೆರಳಿದ್ದ ಸಂದರ್ಭ ಚೈನ್ ಇರುವ ಪರ್ಸ್ ಕಳ್ಳತನ ಆಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







