ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 MAY 2023
SHIMOGA : ಚಿನ್ನ, ಬೆಳ್ಳಿ ವ್ಯಾಪಾರಿಯೊಬ್ಬರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ. ಡೆತ್ ನೋಟ್ (Death Note) ಪತ್ತೆಯಾಗಿದ್ದು ಅದರಲ್ಲಿ ಇಬ್ಬರ ಹೆಸರು ಬರೆದಿಟ್ಟಿದ್ದಾರೆ ಎಂದು ವ್ಯಾಪಾರಿಯ ಪತ್ನಿ ದೂರಿನಲ್ಲಿ ಆರೋಪಿಸಿದ್ದಾರೆ.

ಸಿದ್ದಯ್ಯ ರಸ್ತೆಯ ಕೃಷ್ಣ ಕುಮಾರ್ ಕುರ್ಡೇಕರ್ (38) ಎಂಬುವವರು ತಮ್ಮ ಮನೆಯ ಬಾತ್ ರೂಂನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್ ಕುರ್ಡೇಕರ್ ಅವರು ಚಿನ್ನ ಬೆಳ್ಳಿ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿಂದ ಕೃಷ್ಣ ಕುಮಾರ್ ಅವರಿಗೆ ಇಬ್ಬರು ವ್ಯಕ್ತಿಗಳು ತುಂಬಾ ಮಾನಸಿಕ ಹಿಂಸೆ ನೀಡುತ್ತಿದ್ದರು. ಮಾನಹಾನಿಯಿಂದ ಮನನೊಂದಿದ್ದರು ಎಂದು ಆರೋಪಿಸಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಇದೆ ಕಾರಣಕ್ಕೆ ಮನನೊಂದು ಪತ್ರ (Death Note) ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಪ್ರಶಾಂತ್ ಮೋರೆ ಮತ್ತು ಗಣೇಶ್ ಎಂಬುವವರು ಕಾರಣ ಎಂದು ಕೃಷ್ಣಕುಮಾರ್ ಅವರ ಪತ್ನಿ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಹ್ಯಾದ್ರಿ ಕಾಲೇಜು ಸುತ್ತಮುತ್ತ 24 ಗಂಟೆ ನಿಷೇಧಾಜ್ಞೆ, ಮೈಕ್, ಬ್ಯಾರಿಕೇಡ್ ವ್ಯವಸ್ಥೆ, ಕಾರಣವೇನು?
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



