ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘದ ನವೀಕೃತ ಕಟ್ಟಡ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ಜನಪ್ರತಿನಿಧಿಗಳಿಗೆ ಸನ್ಮಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಸಂಸದ, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಸರ್ಕಾರಿ ನೌಕರರ (Government Employees) ಸಂಘದ ಜಿಲ್ಲಾ ಶಾಖೆಯಿಂದ ಜೂ.23ರಂದು ಅಭಿನಂದನಾ ಕಾರ್ಯಕ್ರಮ, ನವೀಕೃತ ಸರ್ಕಾರಿ ನೌಕರರ ಕಟ್ಟಡದ ಉದ್ಘಾಟನೆ, ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ನವೀಕೃತ ಭವನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಪ್ರತಿಭಾ ಪುರಸ್ಕಾರವನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ನಡೆಸಿಕೊಡಲಿದ್ದಾರೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಬಲ್ಕಿಷ್ ಬಾನು, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಅಲೆಮಾರಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರನ್ನು ಅಭಿನಂದಿಸಲಾಗುವುದು ಎಂದರು.

ಜಿಲ್ಲಾಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ವಿದ್ಯಾರ್ಥಿಗಳಿಗೆ ಪ್ರೇರಣಾ ನುಡಿ ಆಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಹಾಜರಿರಲಿದ್ದಾರೆ ಎಂದರು.

ನೌಕರರ ಸಂಘದ ಪ್ರಮುಖರಾದ ಮೋಹನ್ ಕುಮಾರ್, ಕೃಷ್ಣಮೂರ್ತಿ, ಡಾ.ಹಿರೇಮಠ, ಪಾಪಣ್ಣ ಇತರರಿದ್ದರು.

ಇದನ್ನೂ ಓದಿ – 7ನೇ ವೇತನ ಆಯೋಗ, ವರದಿ ಜಾರಿ ಯಾವಾಗ?, ಷಡಾಕ್ಷರಿ ಹೇಳಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment