ಎನ್.ಪಿ.ಎಸ್ ನೌಕರರಿಗೆ ಗುಡ್ ನ್ಯೂಸ್ ನೀಡಿದ ವಿಧಾನ ಪರಿಷತ್ ಸದಸ್ಯ

SHIVAMOGGA LIVE NEWS | 23 JANUARY 2023

SHIMOGA | ಹಳೆ ಪಿಂಚಣಿಗಾಗಿ ಆಗ್ರಹಿಸಿ ಸರ್ಕಾರಿ ನೌಕರರು (Government Employees) ಶಿವಮೊಗ್ಗದಲ್ಲಿ ಬೈಕ್ ಜಾಥಾ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಿದರು. ಫ್ರೀಡಂ ಪಾರ್ಕಿನಲ್ಲಿ ಸಮಾವೇಶ ನಡೆಸಲಾಯಿತು.

Shivamogga-Live-Number-1-Website

NPS-Workers-Protest-in-Shimoga-City

ಎನ್.ಪಿ.ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ್ ಅವರು ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಾಥಾಗೆ ಚಾಲನೆ ನೀಡಿದರು. ಒಪಿಎಸ್ ಜಾರಿಗೊಳಿಸಬೇಕು ಎಂದು ಘೋಷಣೆ ಕೂಗುತ್ತ ಸರ್ಕಾರಿ ನೌಕರರು (Government Employees) ಮೆರವಣಿಗೆಯಲ್ಲಿ ಪಾಲ್ಗೊಂಡರು.

 ಬಜೆಟ್ ಮೊದಲು ಸಿಎಂ ಜೊತೆ ಸಭೆ 

ಫ್ರೀಡಂ ಪಾರ್ಕಿನಲ್ಲಿ ಎನ್.ಪಿ.ಎಸ್ ನೌಕರರ ಸಮಾವೇಶ, ರಾಜ್ಯ ಕಾರ್ಯಕಾರಿಣಿಗೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಜೆಟ್ ಅಧಿವೇಶನದೊಳಗೆ ಎನ್.ಪಿ.ಎಸ್ ನೌಕರರ ಬೇಡಿಕೆ ಈಡೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಎನ್.ಪಿ.ಎಸ್ ಮುಖಂಡರ ವಿಶೇಷ ಸಭೆ ಆಯೋಜಿಸಲಾಗುತ್ತದೆ. ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಡ ಹೇರಲಾಗುತ್ತದೆ ಎಂದರು.

NPS1

ನಿರ್ಣಾಯಕ ಹಂತಕ್ಕೆ ಹೋರಾಟ

ಇದೆ ವೇಳೆ ಪ್ರತಿಭಟನಾನಿರತನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಶಾಂತಾರಾಮ್ ಅವರು, ಹಳೆ ಪಿಂಚಣಿ ನೀತಿಗಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ನಿರ್ಣಾಯಕ ಹಂತಕ್ಕೆ ತಲುಪಿದೆ. ಪ್ರತಿ ತಾಲೂಕು ಹಂತಕ್ಕೆ ಒಪಿಎಸ್ ಹೋರಾಟ ವಿಸ್ತರಣೆಯಾಗಿದೆ. ಒಪಿಎಸ್ ನಮಗೆ ಸಂವಿಧಾನ ನೀಡಿದ ಹಕ್ಕು. ಇದು ನಮ್ಮ ಬದುಕಿಗಾಗಿ ನಡೆಯುತ್ತಿರುವ ಹೋರಾಟ ಎಂದು ತಿಳಿಸಿದರು.

NPS Workers Protest in Shimoga

ವಿವಿಧೆಡೆಯ ನೌಕರರು

ಒಪಿಎಸ್ ಹೋರಾಟಕ್ಕೆ ಜಿಲ್ಲೆಯ ಎಲ್ಲಾ ತಾಲೂಕಿನಿಂದ ಎನ್.ಪಿ.ಎಸ್ ನೌಕರರು ಆಗಮಿಸಿದ್ದರು. ಶಿವಪ್ಪನಾಯಕ ಪ್ರತಿಮೆಯಿಂದ ಬಿ.ಹೆಚ್.ರಸ್ತೆ, ಸರ್.ಎಂ.ವಿ.ರಸ್ತೆ, ಡಿವಿಎಸ್ ಸರ್ಕಲ್, ಮಹಾವೀರ ವೃತ್ತ, ಸವಳಂಗ ರಸ್ತೆ ಮೂಲಕ ಫ್ರೀಡಂ ಪಾರ್ಕ್ ತಲುಪಿದರು. ಸಮಾವೇಶದಲ್ಲಿ ದೊಡ್ಡ ಸಂಖ್ಯೆಯ ನೌಕರರು ಪಾಲ್ಗೊಂಡಿದ್ದರು.

NPS Workers Protest in Shimoga

ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪರ‍್ಯಾನಾಯ್ಕ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ನಾಗನಗೌಡ, ಹಿರಿಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣ, ಚಂದ್ರಕಾಂತ್, ತಾಲೂಕು ಅಧ್ಯಕ್ಷ ಪ್ರಭಾಕರ್‌, ಪ್ರಮುಖರಾದ ಗುರುಸ್ವಾಮಿ, ಮಹಾಬಲೇಶ್ವರ ಹೆಗಡೆ, ಡಾ. ನಾಗರಾಜ್‌ ಪರಿಸರ, ರಾಧಾ, ಕೇಶವಪ್ರಸಾದ್, ರವಿ, ವಿವಿಧ ಜಿಲ್ಲೆಗಳ ಅಧ್ಯಕ್ಷರು, ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

Shimoga Live 3 million views

ಇದನ್ನೂ ಓದಿ – ಬ್ಯಾಂಕಿನಲ್ಲಿ ಹಣ ಬಿಡಿಸಲು ಚೆಕ್ ನೀಡಿದ ಶಿವಮೊಗ್ಗದ ನೌಕರನಿಗೆ ಕಾದಿತ್ತ ಶಾಕ್, SMS ತಂದ ಸಂಕಷ್ಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 23, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment