ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020
ಕೋಲಾರ ಜಿಲ್ಲೆ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ನೌಕರರು ಮೌನವಾಗಿ ಕುಳಿತು ಪ್ರತಿಭಟಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಹಶೀಲ್ದಾರ್ ಹತ್ಯೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸರ್ಕಾರಿ ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ರಕ್ಷಣಾ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕು ಎಂದು ನೌಕರರು ಒತ್ತಾಯಿಸಿರು.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಮೃತ ತಹಶೀಲ್ದಾರ್ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]