ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021
ಸರ್ಕಾರಿ ನೌಕರರ ನೂತನ ಸುಸಜ್ಜಿತ ಸಭಾಭವನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೂಮಿ ಪೂಜೆ ನೆರವೇರಿಸಿದರು. ಕೆಇಬಿ ಸರ್ಕಲ್ನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಸಭಾ ಭವನ ನಿರ್ಮಾಣವಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭೂಮಿ ಪೂಜೆ ಬಳಿಕ ಮಾತನಾಡಿದ ಸಂಸದ ಬಿ.ವೈ..ರಾಘವೇಂದ್ರ, 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನ 2 ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಅತ್ಯಾಧುನಿಕ, ಮಾದರಿ ಮತ್ತು ಸುಸಜ್ಜಿತವಾಗಿರಲಿದೆ. ಇದೊಂದು ಮೈಲಿಗಲ್ಲು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಜೀವಮಾನವಿಡೀ ತಮ್ಮ ಅಮೂಲ್ಯ ಸಮಯವನ್ನು ಕಚೇರಿಯಲ್ಲಿಯೇ ಕಳೆದು ನಿವೃತ್ತರಾಗುವ ನೌಕರರ ಬದುಕು ಕೂಡ ಹಸನಾಗಬೇಕು. ಅವರು ತಮ್ಮ ನಿವೃತ್ತಿ ಜೀವನವನ್ನು ನೆಮ್ಮದಿಯಿಂದ ಕಳೆಯುವಂತಾಗಬೇಕು. ಅದಕ್ಕಾಗಿ ಸರ್ಕಾರ ಘೋಷಿಸಿ, ಅನುಷ್ಠಾನಕ್ಕೆ ತಂದಿರುವ ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ, ಹಳೆಯ ಪಿಂಚಣಿ ವ್ಯವಸ್ಥೆ ಮುಂದುವರೆಸಲು ಚುನಾಯಿತ ಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಎಸ್.ಜ್ಯೋತಿಪ್ರಕಾಶ್, ಮೇಯರ್ ಸುನಿತಾ ಅಣ್ಣಪ್ಪ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಸೂಡಾ ಆಯುಕ್ತ ಎಂ.ಕರಭೀಮಣ್ಣನವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಡಾ|| ನಾಗರಾಜ ನಾಯ್ಕ್, ರಾಜ್ಯ ಸಂಘದ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ, ಕೋಶಾಧ್ಯಕ್ಷ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200