ಕೆಲಸದ ಒತ್ತಡಕ್ಕೆ ಬ್ರೇಕ್‌, ಆಟೋಟದಲ್ಲಿ ನೌಕರರು ರಿಲ್ಯಾಕ್ಸ್‌, ಹೇಗಿತ್ತು ಕ್ರೀಡಾಕೂಟ? ಏನೆಲ್ಲ ಸ್ಪರ್ಧೆಗಳಿದ್ದವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 MARCH 2024

SHIMOGA : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಬಲೂನ್‌ ಹಾರಿಬಿಟ್ಟು, ಗುಂಡು ಎಸೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಾಮಾರಂಭದಲ್ಲಿ ಯಾರೆಲ್ಲ ಏನೇನು ಹೇಳಿದರು?

ಮಧು ಬಂಗಾರಪ್ಪ, ಸಚಿವ : ಕ್ರೀಡೆ ಮಾನವ ಜೀವನದ ಅಗತ್ಯಗಳಲ್ಲಿ ಒಂದು. ನಿತ್ಯ ನಮ್ಮ ದೈನಂದಿನ ಚಟುವಟಿಕೆಗಳ ಜೊತೆ ಯಾವುದಾದರೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಅಧಿಕಾರಿ, ನೌಕರರ ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿ. ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಮೇ ತಿಂಗಳಲ್ಲಿ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ತಿಳಿಸಿದ್ದಾರೆ. ಆ ಕ್ರೀಡಾಕೂಟಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಸಹಕಾರ ದೊರೆಯಲಿದೆ.

Government Employees sports. CS Shadakshari Madhu Bangarappa

ಸಿ.ಎಸ್.ಷಡಾಕ್ಷರಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ : ಒತ್ತಡದಲ್ಲಿ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಅಗತ್ಯ. ಈ ಹಿನ್ನೆಲೆ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಕ್ರೀಡಾಕೂಟಗಳಿಗೆ ಇನ್ನೂ ಹೆಚ್ಚಿನ ಉತ್ತೇಜನ, ಉತ್ತಮ ಕ್ರೀಡಾಂಗಣ ಮತ್ತು ಸರ್ಕಾರಿ ನೌಕರರ ಕ್ರೀಡಾಕೂಟ ನಡೆಸಲು ಮೂಲಭೂತ ಸೌಕರ್ಯ ಅಗತ್ಯವಿದೆ. ಶಿವಮೊಗ್ಗದಲ್ಲಿಯೇ ರಾಜ್ಯ ಮಟ್ಟದ ಕ್ರೀಡಾ ಕೂಟ ನಡೆಸಲು ಯೋಜಿಸಲಾಗಿದೆ.

Government Employees sports. CS Shadakshari Madhu Bangarappa

ಯಾವೆಲ್ಲ ಕ್ರೀಡೆಗಳಿದ್ದವು?

ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಥ್ರೋಬಾಲ್, ಕಬಡಿ, ವಾಲಿಬಾಲ್, ಟೆನ್ನಿಕಾಯ್ಟ್, ಬ್ಯಾಸ್ಕೆಟ್ ಬಾಲ್, ಫುಟ್‌ಬಾಲ್, ಹಾಕಿ, ಕ್ರಿಕೆಟ್, ಈಜು,ಟೆನ್ನಿಸ್, ಚೆಸ್, ವೆಯ್ಟ್‌ ಲಿಫ್ಟಿಂಗ್, ಫವರ್‌ ಲಿಫ್ಟಿಂಗ್, ಬಾಲ್ ಬ್ಯಾಡ್ಮಿಂಟನ್, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಕೇರಂ, ಕುಸ್ತಿ, ಯೋಗ, ಖೋ- ಖೋ ಕ್ರೀಡೆಗಳಿದ್ದವು.  ಸಾಂಸ್ಕೃತಿ ಕಾರ್ಯಕ್ರಮ ವಿಭಾಗದಲ್ಲಿ ಸಂಗೀತ, ನೃತ್ಯ, ವಾದ್ಯ ಸಂಗೀತ, ಜಾನಪದ ಗೀತೆ, ಜಾನಪದ ನೃತ್ಯ , ಕಿರು ನಾಟಕ, ಕರಕುಶಲ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

Government Employees sports. CS Shadakshari Madhu Bangarappa

ಇದನ್ನೂ ಓದಿ – ಇನ್‌ಸ್ಟಾಗ್ರಾಂನಲ್ಲಿ ಒಂದು ಕ್ಲಿಕ್‌ ಮಾಡಿದ ಶಿವಮೊಗ್ಗದ ಉದ್ಯಮಿಗೆ ಕಾದಿತ್ತು ಬಿಗ್‌ ಶಾಕ್‌, ಕಾರಣವೇನು?

ಶಾಸಕ ಎಸ್.ಎನ್.ಚನ್ನಬಸಪ್ಪ , ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮೋಹನ್ ಕುಮಾರ್, ಗೌರವ ಅಧ್ಯಕ್ಷ ಕೃಷ್ಣಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರುಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಪದಾಧಿಕಾರಿಗಳು ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಸರ್ಕಾರಿ ನೌಕರರು ಹಾಜರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 4, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment