SHIVAMOGGA LIVE NEWS | 4 MARCH 2024
SHIMOGA : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಬಲೂನ್ ಹಾರಿಬಿಟ್ಟು, ಗುಂಡು ಎಸೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಾಮಾರಂಭದಲ್ಲಿ ಯಾರೆಲ್ಲ ಏನೇನು ಹೇಳಿದರು?
ಮಧು ಬಂಗಾರಪ್ಪ, ಸಚಿವ : ಕ್ರೀಡೆ ಮಾನವ ಜೀವನದ ಅಗತ್ಯಗಳಲ್ಲಿ ಒಂದು. ನಿತ್ಯ ನಮ್ಮ ದೈನಂದಿನ ಚಟುವಟಿಕೆಗಳ ಜೊತೆ ಯಾವುದಾದರೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಅಧಿಕಾರಿ, ನೌಕರರ ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿ. ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಮೇ ತಿಂಗಳಲ್ಲಿ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ತಿಳಿಸಿದ್ದಾರೆ. ಆ ಕ್ರೀಡಾಕೂಟಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಸಹಕಾರ ದೊರೆಯಲಿದೆ.
ಸಿ.ಎಸ್.ಷಡಾಕ್ಷರಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ : ಒತ್ತಡದಲ್ಲಿ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಅಗತ್ಯ. ಈ ಹಿನ್ನೆಲೆ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಕ್ರೀಡಾಕೂಟಗಳಿಗೆ ಇನ್ನೂ ಹೆಚ್ಚಿನ ಉತ್ತೇಜನ, ಉತ್ತಮ ಕ್ರೀಡಾಂಗಣ ಮತ್ತು ಸರ್ಕಾರಿ ನೌಕರರ ಕ್ರೀಡಾಕೂಟ ನಡೆಸಲು ಮೂಲಭೂತ ಸೌಕರ್ಯ ಅಗತ್ಯವಿದೆ. ಶಿವಮೊಗ್ಗದಲ್ಲಿಯೇ ರಾಜ್ಯ ಮಟ್ಟದ ಕ್ರೀಡಾ ಕೂಟ ನಡೆಸಲು ಯೋಜಿಸಲಾಗಿದೆ.
ಯಾವೆಲ್ಲ ಕ್ರೀಡೆಗಳಿದ್ದವು?
ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಥ್ರೋಬಾಲ್, ಕಬಡಿ, ವಾಲಿಬಾಲ್, ಟೆನ್ನಿಕಾಯ್ಟ್, ಬ್ಯಾಸ್ಕೆಟ್ ಬಾಲ್, ಫುಟ್‌ಬಾಲ್, ಹಾಕಿ, ಕ್ರಿಕೆಟ್, ಈಜು,ಟೆನ್ನಿಸ್, ಚೆಸ್, ವೆಯ್ಟ್ ಲಿಫ್ಟಿಂಗ್, ಫವರ್ ಲಿಫ್ಟಿಂಗ್, ಬಾಲ್ ಬ್ಯಾಡ್ಮಿಂಟನ್, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಕೇರಂ, ಕುಸ್ತಿ, ಯೋಗ, ಖೋ- ಖೋ ಕ್ರೀಡೆಗಳಿದ್ದವು. ಸಾಂಸ್ಕೃತಿ ಕಾರ್ಯಕ್ರಮ ವಿಭಾಗದಲ್ಲಿ ಸಂಗೀತ, ನೃತ್ಯ, ವಾದ್ಯ ಸಂಗೀತ, ಜಾನಪದ ಗೀತೆ, ಜಾನಪದ ನೃತ್ಯ , ಕಿರು ನಾಟಕ, ಕರಕುಶಲ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಇದನ್ನೂ ಓದಿ – ಇನ್‌ಸ್ಟಾಗ್ರಾಂನಲ್ಲಿ ಒಂದು ಕ್ಲಿಕ್ ಮಾಡಿದ ಶಿವಮೊಗ್ಗದ ಉದ್ಯಮಿಗೆ ಕಾದಿತ್ತು ಬಿಗ್ ಶಾಕ್, ಕಾರಣವೇನು?
ಶಾಸಕ ಎಸ್.ಎನ್.ಚನ್ನಬಸಪ್ಪ , ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮೋಹನ್ ಕುಮಾರ್, ಗೌರವ ಅಧ್ಯಕ್ಷ ಕೃಷ್ಣಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರುಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಪದಾಧಿಕಾರಿಗಳು ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಸರ್ಕಾರಿ ನೌಕರರು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200