ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2022
ಶಿವಮೊಗ್ಗ : ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ (sports meet) ಮತ್ತು ವಿವಿಧ ಸ್ಪರ್ಧೆಗಳನ್ನು ನಗರದ ನೆಹರೂ ಸ್ಟೇಡಿಯಂನಲ್ಲಿ ನಡೆಸಲಾಯಿತು. ವಿವಿಧ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ನೌಕರರ ಭಾಗವಹಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನೆಹರೂ ಸ್ಟೇಡಿಯಂನಲ್ಲಿ ಸರ್ಕಾರಿ ನೌಕರರಿಗಾಗಿ ವಾಲಿಬಾಲ್, ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ ಬಾಲ್ ಸೇರಿದಂತೆ ವಿವಿಧ ಅಥ್ಲೆಟಿಕ್ ಸ್ಪರ್ಧೆಗಳನ್ನು (sports meet) ಆಯೋಜಿಸಲಾಗಿತ್ತು. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇನ್ನು, ಸಾಂಸ್ಕೃತಿಕ ಸ್ಪರ್ಧೆಗಳನ್ನು ಕೂಡ ಆಯೋಜಿಸಲಾಗಿತ್ತು. ನೆಹರೂ ಕ್ರೀಡಾಂಗಣದಲ್ಲಿಯೇ ನಿರ್ಮಿಸಲಾಗಿದ್ದ ವೇದಿಕೆಗಳಲ್ಲಿ ಜಾನಪದ ಹಾಡು, ಕೆಲ ಪ್ರದರ್ಶನ ಸ್ಪರ್ಧೆಗಳು ನಡೆದವು. ಜಿಲ್ಲೆಯ ವಿವಿಧೆಡೆಯ ಸರ್ಕಾರಿ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನೇತೃತ್ವದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಇದನ್ನೂ ಓದಿ – 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?
ಇದಕ್ಕೂ ಮೊದಲು ಜಿಲ್ಲಾ ಮಟ್ಟದ ಕ್ರೀಡಾಕೂಟಗಳಿಗೆ ಚಾಲನೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಹಿರಿಯರು ತಮ್ಮ ಕುಟುಂಬದ ಕಿರಿಯರೊಂದಿಗೆ ಸೇರಿ ದೈನಂದಿನ ಕೆಲ ಸಮಯವನ್ನಾದರೂ ಕ್ರೀಡೆ ಹಾಗೂ ಮನೋರಂಜನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಶುಭಾರಂಭಗೊಳ್ಳುವುದು ಶಿವಮೊಗ್ಗದಿಂದಲೇ. ಇಲ್ಲಿನ ಅಧಿಕಾರಿ-ಸಿಬ್ಬಂಧಿಗಳ ಪರಿಶ್ರಮದಿಂದ ಬಹುತೇಕ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ಬಂದಿವೆ ಎಂದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ದಿನನಿತ್ಯ ಒತ್ತಡದಲ್ಲಿ ದಿನಕಳೆಯುವ ನೌಕರರು ಕೆಲ ಸಮಯವಾದರೂ ಎಲ್ಲಾ ಒತ್ತಡಗಳಿಂದ ಹೊರಬಂದು ನೆಮ್ಮದಿಯ ಕ್ಷಣಗಳನ್ನು ಕಳೆಯಲು, ಇಲಾಖೆಗಳ, ಅಧಿಕಾರಿ-ಸಿಬ್ಬಂಧಿಗಳೊಂದಿಗೆ ಸ್ನೇಹದ ವಾತಾವರಣ ನಿರ್ಮಿಸುವಲ್ಲಿ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಭೋಜೆಗೌಡ, ಡಿ.ಎಸ್.ಅರುಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಷಡಾಕ್ಷರಿ, ಆರ್.ಮೋಹನ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.