ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEW S | 19 FEBRUARY 2024

SHIMOGA : ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜಿಸಲಾಗಿದೆ. ಆಂದು ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಆಶಾಭಾವನೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ತಿಳಿಸಿದರು.

ಸಿಎಂ, ಡಿಸಿಂ, ಮಿನಿಸ್ಟರ್‌ಗಳು ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಶಯ ನುಡಿ ನುಡಿಯಲಿದ್ದಾರೆ. ಸಚಿವರಾದ ಡಾ. ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಆಡಳಿತದಲ್ಲಿ  ಕಾರ್ಯಕ್ಷಮತೆ ಮತ್ತು ನೌಕರರ ಆರೋಗ್ಯ ಸುಧಾರಣೆ ಸಂಬಂಧ ಕಾರ್ಯಾಗಾರ ಆಯೋಜಿಸಲಾಗಿದೆ. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಕಾರ್ಯಾಗಾರ ನಡೆಸಲಿದ್ದಾರೆ ಎಂದು ತಿಳಿಸಿದರು.

ಶಿವಮೊಗ್ಗದಿಂದ ನೂರು ಬಸ್ಸು

ಏಳು ವರ್ಷದ ಬಳಿಕ ಮಹಾ ಸಮ್ಮೇಳನ ನಡೆಯುತ್ತಿದೆ. ವಿವಿಧ ಜಿಲ್ಲೆಗಳಿಂದ ಸುಮಾರು ಎರಡು ಲಕ್ಷ ನೌಕರರು ಭಾಗವಹಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ 100 ಬಸ್ಸುಗಳಲ್ಲಿ ಸುಮಾರು 5 ಸಾವಿರ ನೌಕರರು ಸಮ್ಮೇಳನಕ್ಕೆ ತೆರಳಲಿದ್ದಾರೆ ಎಂದು ಷಡಾಕ್ಷರಿ ತಿಳಿಸಿದರು.

CS Shadakshari

ಮೂರು ಪ್ರಮುಖ ಬೇಡಿಕೆ

ಸಮ್ಮೇಳನದಲ್ಲಿ ಸರ್ಕಾರಕ್ಕೆ ಮೂರು ಪ್ರಮುಖ ಬೇಡಿಕೆ ಸಲ್ಲಿಸಲಾಗುತ್ತದೆ. 7ನೇ ವೇತನ ಆಯೋಗದಿಂದ ವರದಿ ಪಡೆದು, ಆಯೋಗದ ಶಿಫಾರಸ್ಸು ಶೀಘ್ರ ಜಾರಿಗೊಳಿಸಬೇಕು. ಓಪಿಎಸ್ ಮರು ಸ್ಥಾಪನೆ ಮಾಡಬೇಕು. ಎನ್‌ಪಿಎಸ್ ನೌಕರರ ವೇತನದಲ್ಲಿ ಕಟಾವು ಮಾಡುತ್ತಿರುವ ವಂತಿಗೆಯನ್ನು ಏಪ್ರಿಲ್ ತಿಂಗಳಿಂದ ಕಡಿತಗೊಳಿಸಬೇಕು. ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬಕ್ಕೆ ನಗದು ರಹಿತ ಆರೋಗ್ಯ ಚಿಕಿತ್ಸೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಜಾರಿಗೊಳಿಸಬೇಕು ಎಂಬ ಬೇಡಿಕೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು‌.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಮೋಹನ್, ಪ್ರಮುಖರಾದ ಶಿವಕುಮಾರ್ ಎಲಿ, ಮಾರುತಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ವಾಟ್ಸಪ್‌ ಸ್ಟೇಟಸ್‌ ಪ್ರಿಯರಿಗೆ ಗುಡ್‌ ನ್ಯೂಸ್‌, ಸದ್ಯದಲ್ಲೆ ಬರಲಿದೆ ಹೊಸ ಫೀಚರ್

 

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment