ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ರಾಜ್ಯದ ಎಲ್ಲಾ ಸಮುದಾಯಗಳ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸ್ವೀಕರಿಸಿ ಅನುಷ್ಠಾನಗೊಳಿಸಿ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.೪ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಎಲ್ಲಾ ಸಮುದಾಯಗಳ ಸಮೀಕ್ಷಾ ವರದಿಯ ವಿಚಾರಕ್ಕೆ ಸಂಬಂಧಿಸಿದಂತೆ ವಿವರವಾದ ಚರ್ಚೆ ನಡೆಸಲಾಗಿದೆ ಎಂದರು.
ಸುಮಾರು ೨೦೦ ಕೋಟಿ ವೆಚ್ಚದಲ್ಲಿ ಸಮೀಕ್ಷಾ ವರದಿ ತಯಾರಿಸಲಾಗಿದೆ. ಈ ವರದಿಯಲ್ಲಿ ಕೇವಲ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ಸಮುದಾಯದವರ ಹಾಗೂ ರಾಜ್ಯದಲ್ಲಿ ಇರುವ ಇತರೆ ಎಲ್ಲಾ ಸಮುದಾಯದವರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸೇರಿದಂತೆ ಸಮಗ್ರ ಮಾಹಿತಿ ಅಡಕವಾಗಿದೆ. ಆದ್ದರಿಂದ ಈ ವರದಿಯನ್ನು ಮೊದಲು ಸ್ವೀಕರಿಸಬೇಕು. ನಂತರ ಅಧ್ಯಯನ ನಡೆಸಬೇಕು. ತದನಂತರ ಅದನ್ನು ಅನುಷ್ಠಾನಗೊಳಸಬೇಕೆಂದು ಮುಖ್ಯಮಂತ್ರಿಗಳೊಂದಿಗೆ ನಡೆದ ಚರ್ಚೆಯಲ್ಲಿ ಮನವಿ ಮಾಡಲಾಗಿದೆ ಎಂದರು ತಿಳಿಸಿದರು.
ಮಾಹಿತಿಯು ೫೦ ಕ್ಕೂ ಹೆಚ್ಚು ಅಂಶಗಳನ್ನು ಒಳಗೊಂಡಿದೆ. ಅಲ್ಲದೆ ಇದರಲ್ಲಿ ಸರ್ಕಾರಕ್ಕೆ ಕೆಲವು ಶಿಫಾರಸ್ಸುಗಳನ್ನು ಸಹ ಮಾಡಲಾಗಿದೆ. ಸಮಿತಿಯು ನೀಡಿರುವ ವರದಿ ಆಧಾರದ ಮೇಲೆ ಸರ್ಕಾರ ಅಂಕಿ-ಅಂಶಗಳ ಅಧ್ಯಯನ ನಡೆಸಿ, ನೀತಿ-ನಿಯಮಗಳನ್ನು ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿ.ರಾಜು, ಟಿ.ಆರ್. ಗಿರಿಯಪ್ಪ, ಸಿ.ಹೊನ್ನಪ್ಪ, ಅರುಣ್ ಕುಮಾರ್, ಚಂದ್ರಶೇಖರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422