ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಉಳಿದ ನಗರಗಳಿಗೆ ಹೋಲಿಕೆ ಮಾಡಿದರೆ ಶಿವಮೊಗ್ಗದಲ್ಲಿ ನಗರಾಭಿವೃದ್ದಿ ಪ್ರಾಧಿಕಾರ ಅತ್ಯಂತ ಕಡಿಮೆ ಬಡಾವಣೆಗಳನ್ನು (Layout) ನಿರ್ಮಿಸಿದೆ. ಆದ್ದರಿಂದ ಇನ್ಮುಂದೆ ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡದೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡಾವಣೆ ನಿರ್ಮಿಸಬೇಕು. ಬಡವರು, ಮಧ್ಯಮ ವರ್ಗದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸೂಚಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ, ಕೆಯುಐಡಿಎಫ್‌ಸಿ, ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿರು.
ಖಾಸಗಿಯವರಿಗೆ ಲೇಔಟ್ (Layout) ನಿರ್ಮಾಣ ಮಾಡಲು ಅವಕಾಶ ಕಲ್ಪಿಸುವುದಷ್ಟೆ ನಗರಾಭಿವೃದ್ಧಿ ಪ್ರಾಧಿಕಾರದ ಕೆಲಸವಲ್ಲ. ಶಿವಮೊಗ್ಗದಲ್ಲಿ ಕನಿಷ್ಠ 500 ಎಕರೆಯಲ್ಲಿ ಸರ್ಕಾರಿ ಬಡಾವಣೆ ನಿರ್ಮಾಣ ಮಾಡಿ ಬಡವರು, ಮಧ್ಯಮ ವರ್ಗದವರಿಗೆ ಹಂಚಿಕೆ ಮಾಡಬೇಕು. ಆ ಬಳಿಕವೆ ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ?
ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ಅಭಿವೃದ್ದಿ ಕಾರ್ಯಗಳು ನಡೆದಿವೆ. ಇನ್ನೂ ಸುಮಾರು 800 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಬಹುದಾಗಿದೆ. ಆದ್ದರಿಂದ ಶೀಘ್ರ ಕಾರ್ಯಕ್ರಮ ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಕಳಪೆಯಾಗಿದೆ. ಸದ್ಯ ಯೋಜನೆಗೆ ಮೀಸಲಿಟ್ಟ ಹಣದಲ್ಲಿ 70 ಕೋಟಿ ರೂ. ಬಾಕಿ ಇದೆ. ಆ ಹಣದಲ್ಲಿ ಉಳಿದ ಕಾಮಗಾರಿ ಪೂರ್ಣ ಮಾಡಬೇಕಿದೆ. ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರಿಂದ ಹಣ ಹಿಂಪಡೆಯಲಾಗುತ್ತದೆ. ಹಣವಿಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್ ಸಟಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣಗೌಡ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.