ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 FEBRUARY 2024
SHIMOGA : ಮಹಾನಗರ ಪಾಲಿಕೆ ಅವಧಿ ಮುಕ್ತಾಯವಾಗಿ ನಾಲ್ಕು ತಿಂಗಳು ಕಳೆದಿದೆ. ಸರ್ಕಾರ ಕೂಡಲೆ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸದಸ್ಯರು ಇಲ್ಲದಿರುವುದರಿಂದ ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ. ಕಸ ವಿಲೇವಾರಿ ಪರಿಪೂರ್ಣವಾಗಿ ಆಗದೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯತ್ತಿಲ್ಲ ಎಂದು ಆರೋಪಿಸಿದರು.
ಮಲವಗೊಪ್ಪ, ಗಾಡಿಕೊಪ್ಪ, ಬೊಮ್ಮನಕಟ್ಟೆ, ನವುಲೆ, ಮಲ್ಲಿಗೆನಹಳ್ಳಿ, ವಡ್ಡಿಕೊಪ್ಪ ಸೇರಿದ ಹಲವು ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡು 20 ವರ್ಷವಾದರು ಅಭಿವೃದ್ದಿಯಾಗಿಲ್ಲ. ಈಗ ಸೋಗಾನೆ, ಗೋವಿಂದಾಪುರ, ಅನುಪಿನಕಟ್ಟೆ ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಾಲಿಕೆ ಆಯುಕ್ತರಿಗೆ ಪತ್ರೆ ಬರೆದಿದ್ದಾರೆ ಎಂದರು.
ಇದನ್ನೂ ಓದಿ – ಮೈಸೂರು ಪೇಪರ್ ಮಿಲ್ಸ್ ಪುನಾರಂಭ ಕುರಿತು ಪರಿಷತ್‌ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422