ರಾಜ್ಯದಲ್ಲೇ ಮೊದಲ ಸರ್ಕಾರಿ ನೌಕರರ ಕ್ಯಾಂಟೀನ್ ಶಿವಮೊಗ್ಗದಲ್ಲಿ ಆರಂಭ, ಎಲ್ಲಿದೆ ಕ್ಯಾಂಟೀನ್? ಇಲ್ಲಿ ಏನೇನು ಸೌಲಭ್ಯವಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 18 ಜನವರಿ 2020

2019 readers copy new

ಸರಕಾರಿ ನೌಕರರಿಗಾಗಿ ರಾಜೇಂದ್ರ ನಗರದ ಕಂದಾಯ ನೌಕರರ ಭವನದಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್ ಅನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ, ಸರಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ರಿಯಾಯಿತಿ ದರದಲ್ಲಿ ದಿನ ಬಳಕೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ದೊರಕಿಸಿಕೊಡುವ ಪರಿಕಲ್ಪನೆ ಇಟ್ಟುಕೊಂಡು ಈ ಕ್ಯಾಂಟೀನ್ ಆರಂಭಿಸಲಾಗಿದೆ. ಈ ಕ್ಯಾಂಟೀನ್‌ ಮೂಲಕ ಆಹಾರ ಧಾನ್ಯ, ದೈನಂದಿನ ಮನೆ ಬಳಕೆ ವಸ್ತುಗಳನ್ನು ಸರಕಾರಿ ನೌಕರರು ರಿಯಾಯಿತಿ ದರದಲ್ಲಿ ಪಡೆಯಬಹುದು ಎಂದು ತಿಳಿಸಿದರು.

ಈ ಸೌಲಭ್ಯವನ್ನು ತಮಗೂ ನೀಡುವಂತೆ ನಿವೃತ್ತ ನೌಕರರು, ವಿದ್ಯಾಲಯದ ನೌಕರರು, ಸ್ಥಳೀಯ ಸಂಸ್ಥೆಗಳ ನೌಕರರು, ವೈದ್ಯರು ಹೇಳಿದ್ದಾರೆ. ಮುಂದಿನ ದಿನದಲ್ಲಿ ಅವರಿಗೂ ಸೌಲಭ್ಯ ದೊರಕಿಸಿಕೊಡುವ ಪ್ರಯತ್ನ ನಡೆಸಲಾಗುವುದು ಎಂದರು.

ಕ್ಯಾಂಟೀನ್‌ನಲ್ಲಿ ಪ್ರಖ್ಯಾತ ಕಂಪನಿಗಳ ರೆಫ್ರಿಜರೇಟರ್, ಟಿವಿ, ಮೊಬೈಲ್, ಮಿಕ್ಸರ್‌ ಗ್ರೈಂಡರ್‌ ಸೇರಿದಂತೆ ಎಲ್ಲ ರೀತಿಯ ಗೃಹೋಪಯೋಗಿ ವಸ್ತುಗಳು ಹಾಗೂ ದಿನನಿತ್ಯ ಬಳಕೆಯ ಪದಾರ್ಥಗಳು ದೊರಕಲಿದೆ. ನೌಕರರಿಗೆ ಸಾಲ ಸೌಲಭ್ಯ ಲಭ್ಯವಿದೆ. ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ಸಹ ಕೊಳ್ಳಬಹುದಾಗಿದೆ. ಕೊಂಡುಕೊಡಂತಹ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ, ಆನ್ ಲೈನ್ ಮೂಲಕ ತಮಗೆ ಬೇಕಾದ ವಸ್ತುಗಳನ್ನು ಬುಕಿಂಗ್ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

82423900 1032512957110124 2830312533858975744 o.jpg? nc cat=107& nc ohc=GA0j0ziDt1oAX kgtQI& nc ht=scontent.fixe1 1

ಕ್ಯಾಂಟೀನ್‌ನಲ್ಲಿ ಕಂಪನಿಗಳಿಂದ ಉತ್ಪನಗಳು ನೇರವಾಗಿ ಹಾಗೂ ಕಡಿಮೆ ದರದಲ್ಲಿ ದೊರಕಲಿದೆ. ದಿನ ಬಳಕೆ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಸುಮಾರು 450ಕ್ಕೂ ಹೆಚ್ಚು ಉತ್ಪನ್ನ ಲಭ್ಯವಿದೆ. ಸರಕಾರಿ ನೌಕರರ ಸಂಘದಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಕ್ಯಾಂಟಿನ್ ಪ್ರಾರಂಭ ಗೊಂಡಿದೆ. ಆರು ಸಾವಿರಕ್ಕೂ ಹೆಚ್ಚು ಮಂದಿ ಇದರ ಸದಸ್ಯತ್ವ ಪಡೆದಿದ್ದಾರೆ. ಮುಂದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಇದನ್ನು ವಿಸ್ತರಿಸುವ ಉದ್ದೇಶ ಇದೆ ಎಂದು ಷಡಾಕ್ಷರಿ ತಿಳಿಸಿದರು.

82836268 1032512730443480 1807831818846601216 n.jpg? nc cat=100& nc ohc=9ISvfz1RnO0AX i4qH5& nc ht=scontent.fixe1 1

ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜ್ ಮತ್ತಿತರರು ಹಾಜರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Government Employees union has set up a canteen for the employees. This the first canteen established in Karnataka.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 18, 2020

Leave a Comment