ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 ಮಾರ್ಚ್ 2022
ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚಾಲನೆ ನೀಡಿದರು. ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಕ್ರೀಡಾಜ್ಯೋತಿ ಸ್ವೀಕರಿಸಿದರು. ಇದೆ ಸಂದರ್ಭ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಸರ್ಕಾರಿ ನೌಕರರು ಪಥ ಸಂಚಲನ ನಡೆಸಿದರು.
‘ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ’
ಇದೆ ಸಂದರ್ಭ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು, ಮೇ ತಿಂಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ರಾಜ್ಯಮಟ್ಟದ ಕ್ರೀಡಾಕೂಟ ಮಾಡಿದ್ದೆವು. ಈಗ ಪುನಃ ಅವಕಾಶ ಲಭಿಸಿದೆ. ಸುಮಾರು 15 ಸಾವಿರ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
‘ಕೇಂದ್ರ ನೌಕರರ ಸಮಾನ ವೇತನ’
ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಸಮನಾದ ವೇತನವನ್ನು ನೀಡಬೇಕು ಎಂಬುದು ಹಲವು ದಶಕಗಳ ಬೇಡಿಕೆ. ಈ ಸರ್ಕಾರದ ಅವಧಿಯಲ್ಲಿ ಬೇಡಿಕೆ ಈಡೇರಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದನದಲ್ಲೇ ಭರವಸೆ ನೀಡಿದ್ದಾರೆ. ಪಕ್ಷಾತೀತವಾಗಿ ಎಲ್ಲಾ ಶಾಸಕರು ಬೆಂಬಲಿಸಿರುವುದು ಖುಷಿಯ ವಿಚಾರ ಎಂದು ಷಡಾಕ್ಷರಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಎಲ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಪ್ರಮುಖರಾದ ರಾಜೇಶ್ ಕಾಮತ್, ದಿವಾಕರ ಶೆಟ್ಟಿ, ಸರ್ಕಾರಿ ನೌಕರರ ಸಂಘದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಘಟಕದ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ | ನೆಹರೂ ಕ್ರೀಡಾಂಗಣದಲ್ಲಿ ಮಹಿಳಾ ನೌಕರರ ಹಗ್ಗ ಜಗ್ಗಾಟ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422