ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020
ಕೋವಿಡ್ ಆತಂಕದ ನಡುವೆಯು ಶಿವಮೊಗ್ಗದಲ್ಲಿ ಶ್ರದ್ಧಾ, ಭಕ್ತಿಯಿಂದ ಗೌರಿ ಹಬ್ಬ ಆಚರಿಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗೌರಿ ಮೂರ್ತಿಗೆ ಭಕ್ತಿಪೂರ್ವಕ ಪೂಜೆ
ದೇಗುಲದ ಆವರಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಭಕ್ತರು ಗೌರಿ ಮೂರ್ತಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.
ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನ್
ದೇಗುಲಕ್ಕೆ ಬರುವ ಪ್ರತಿ ಭಕ್ತರಿಗೂ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನ್ ಮಾಡಿ ದೇಗುಲದ ಒಳ ಬಿಡಲಾಗುತ್ತಿದೆ.
91 ವರ್ಷದ ಇತಿಹಾಸ
ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿ ಗೌರಿ ಮತ್ತು ಗಣಪತಿ ಪ್ರತಿಷ್ಠಾಪನೆಗೆ 91 ವರ್ಷದ ಇತಿಹಾಸವಿದೆ. ಪ್ರತಿ ವರ್ಷ ಅದ್ಧೂರಿಯಾಗಿ ಗಣೇಶೋತ್ಸವ ನಡೆಯುತ್ತಿದೆ. ಇಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಭಾರಿ ಪ್ರಖ್ಯಾತಿ ಪಡೆದಿದೆ. ಈ ಬಾರಿ ಕರೋನ ಆತಂಕದಿಂದಾಗಿ ಇತಿಹಾಸ ಪ್ರಸಿದ್ಧ ಗಣೇಶೋತ್ಸವದ ಮೇಲೆ ಕರಿಛಾಯೆ ಆವರಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]