ಶಿವಮೊಗ್ಗದಲ್ಲಿ ಗ್ರಾಮ ಸೇವಾ ಸಂಘದಿಂದ ವಸ್ತುಪ್ರದರ್ಶನ, ಮಾರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2020

ಗ್ರಾಮಸೇವಾ ಸಂಘ ಹಾಗೂ ಕಟಿಲು ಅಶೋಕ್‌ಪೈ ಸ್ಮಾರಕ ಕಾಲೇಜು ಇವರ ಸಂಯುಕ್ತಾಶ್ರ ಯದಲ್ಲಿ ಅ.31 ರಿಂದ ನ.2ರವರೆಗೆ ನಗರದ ಮಲ್ಲಿಕಾರ್ಜುನ ಚಿತ್ರ ಮಂದಿರ ಹಿಂಭಾಗದಲ್ಲಿರುವ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ವಿನೋದಿನಿ ಕಟ್ಟಡದಲ್ಲಿ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ ಎಂದು ಚರಕ ಕೈಮಗ್ಗ ಸಹಕಾರ ಸಂಘದ ಮುಖ್ಯಸ್ಥೆ ಪ್ರತಿಭಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ, ಚರಕ ಕೈಮಗ್ಗ ಸಹಕಾರ ಸಂಘದ ಮಹಿಳೆಯರು ಇತ್ತೀಚೆಗೆ ಹೆಗ್ಗೋಡಿನಲ್ಲಿ ನಡೆಸಿದ ಚಾರಿತ್ರಿಕ ಹೋರಾಟದಿಂದ ಪ್ರೇರಿತವಾಗಿ ಗ್ರಾಮ ಸೇವಾ ಸಂಘವು ಗ್ರಾಮೋದ್ಯೋಗ ಉಳಿಸಿ ಎಂಬ ರಾಜ್ಯವ್ಯಾಪಿ ಆಂದೋಲನಕ್ಕೆ ಕರೆ ನೀಡಿದೆ. ಇದೊಂದು ರಚನಾತ್ಮಕ ಆಂದೋಲನವಾಗಿದ್ದು, ಈ ಹಿನ್ನೆಲೆ ಯಲ್ಲಿ ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಕನ್ನಡ ರಾಜ್ಯೋತ್ಸವದ ಸಂದರ್ಭ ಈ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ವಸ್ತ್ರ ವಿನ್ಯಾಸ, ಸಿದ್ಧ ಉಡುಪು, ಕರಕುಶಲ ವಸ್ತುಗಳು ಹಾಗೂ ಕೃಷಿ ಉತ್ಪನ್ನಗಳ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹೆಸರಾಂತ ವಿನ್ಯಾಸಕಾರರು, ಆರ್ಥಿಕ ತಜ್ಞರು ಹಾಗೂ ಸಾಮಾಜಿಕ ಕಾರ್ಯಕರ್ತರು ಗ್ರಾಹಕ ಚಳವಳಿಯ ನೇತೃತ್ವ ವಹಿಸಿದ್ದಾರೆ. ಪ್ರದರ್ಶನ ಮಾರಾಟದೊಟ್ಟಿಗೆ ಸಂಸ್ಥೆ ಆವರಣದಲ್ಲಿ ಚರ್ಚಾಗೋಷ್ಠಿ, ಸಾಂಸ್ಕೃ ತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರದರ್ಶನದಲ್ಲಿ ಗ್ರಾಮೋದ್ಯೋಗಕ್ಕೆ ಸಂಬಂಧಪಟ್ಟಂತೆ ಕೈಉತ್ಪನ್ನಗಳು ಇರುತ್ತವೆ. ಕೈಉತ್ಪನ್ನಗಳನ್ನೆ ಕೊಳ್ಳಿ ಎಂದು ಜನತೆಗೆ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಕ್ಲಿಕ್ ಮಾಡಿ, ವಿಡಿಯೋ ನೋಡಿ

ಅ.31 ರಂದು ಬೆಳಿಗ್ಗೆ 11 ಗಂಟೆಗೆ ಉದ್ಗಾಟನೆ ಕಾರ್ಯಕ್ರಮವಿರುತ್ತದೆ. ಡಾ.ರಜನಿ ಪೈ, ಅರುಣಾದೇವಿ ಮತ್ತು ಪ್ರಸನ್ನ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಂಗಕರ್ಮಿ ಪ್ರಸನ್ನ ಮತ್ತು ಡಿವಿಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್.ಟಿ.ಕೃಷ್ಣಮೂರ್ತಿ ಅಂದು ವಾಲ್ಮೀಕಿ ಜಯಂತಿ ಅಂಗವಾಗಿ ರಾಮಾಯಣ ಓದು, ವಾಲ್ಮೀಕಿ ಮತ್ತು ರಾಮಾಯಣ ಪರಂಪರೆ ಕುರಿತು ಮಾತನಾಡಲಿದ್ದಾರೆ ಎಂದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ನ.1ರ ಬೆಳಿಗ್ಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ 11.30ಕ್ಕೆ ಚಿಂತಕ ರಾಜೇಂದ್ರ ಚೆನ್ನಿ ಹಾಗು ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಮೇಠಿ ಶ್ರಮಜೀವಿಗಳ ಕನ್ನಡ ಕುರಿತು ಮಾತನಾಡುವರು. ಸಂಜೆ 5ಕ್ಕೆ ನಮ್ ಟೀಮ್ ತಂಡದಿಂದ ಕರೋನಾ ಜೊತೆ ಜೀವನ ಕುರಿತು ಕಿರು ನಾಟಕ ಹಮ್ಮಿಕೊಳ್ಳಲಾದೆ. ಇದನ್ನು ಗೂಗಲ್ ಮೀಟ್‌ನಲ್ಲೂ ಕೂಡ ನೋಡಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂದ್ಯಾಕಾವೇರಿ, ಸಿ.ಹೆಚ್.ಅಭಿಲಾಶ್ ಇದ್ದರು.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment