SHIVAMOGGA LIVE NEWS | 3 FEBRUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಬೇಳೂರು ಗೋಪಾಲಕೃಷ್ಣ ಅವರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿ ಸ್ವಾಗತಿಸಿದರು. ಬೆಕ್ಕಿನ ಕಲ್ಮಠದ ಬಳಿ ಬೇಳೂರು ಗೋಪಾಲಕೃಷ್ಣ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.
ನಗರದಲ್ಲಿ ಬೈಕ್ ಜಾಥಾ
ಬೇಳೂರು ಗೋಪಾಲಕೃಷ್ಣ ಅವರನ್ನು ಬೈಕ್ ಜಾಥಾ ಮೂಲಕ ಕಾಂಗ್ರೆಸ್ ಕಚೇರಿಗೆ ಕರೆತರಲಾಯಿತು. ಬೆಕ್ಕಿನಕಲ್ಮಠದಿಂದ ಬಿ.ಹೆಚ್.ರಸ್ತೆ ಮೂಲಕ ಶಿವಪ್ಪನಾಯಕ ಪ್ರತಿಮೆ, ಅಮೀರ್ ಅಹಮ್ಮದ್ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ಬಾಲರಾಜ ಅರಸ್ ರಸ್ತೆ ಮೂಲಕ ಕಾಂಗ್ರೆಸ್ ಕಚೇರಿಗೆ ಕರೆತರಲಾಯಿತು. ಕಾಂಗ್ರೆಸ್ ಕಚೇರಿ ಬಳಿ ಬೇಳೂರು ಗೋಪಾಲಕೃಷ್ಣ ಅವರನ್ನು ಹೆಗಲ ಮೇಲೆ ಹೊತ್ತು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ಹಾರದಲ್ಲಿದ್ದ ಸೇಬಿಗೆ ಮುಗಿಬಿದ್ದ ಜನ
ಬೇಳೂರು ಗೋಪಾಲಕೃಷ್ಣ ಅವರು ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸೇಬು ಹಣ್ಣಿನ ಬೃಹತ್ ಹಾರ ಹಾಕಿದರು. ಅದರಲ್ಲಿದ್ದ ಸೇಬು ಹಣ್ಣುಗಳನ್ನು ಕಿತ್ತುಕೊಳ್ಳಲು ನೂಕುನುಗ್ಗಲು ಉಂಟಾಯಿತು.
ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ
ಅರಣ್ಯ ಕೈಗರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ – ಶಿವಮೊಗ್ಗ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ, ಯಾರು ಹೊಸ ತಹಶೀಲ್ದಾರ್?




LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






