ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಬಿಡುಗಡೆಯಾಗಿದೆ. ಜಿಲ್ಲೆಯ 3.78 ಲಕ್ಷಕ್ಕೂ ಅಧಿಕ ಅರ್ಹ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ ₹2,000 ರಂತೆ ನೇರವಾಗಿ ಡಿಬಿಟಿ ಮೂಲಕ ಹಣ ಜಮೆ ಮಾಡಲಾಗಿದೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್ಸೈಟ್ನಲ್ಲಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಈ ಕುರಿತು ಮಾಹಿತಿ ನೀಡಿರುವ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್. ಚಂದ್ರಭೂಪಾಲ, ಯೋಜನೆ ಜಾರಿಯಾದಾಗಿನಿಂದ ಇದುವರೆಗೆ ನಡೆದ 32 ಕಂತುಗಳಲ್ಲಿ ಪ್ರತಿಯೊಬ್ಬ ಫಲಾನುಭವಿಗೆ ತಲಾ ₹2,000 ರಂತೆ ಒಟ್ಟು ₹64,000 ಪಾವತಿಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ 33ನೇ ಕಂತಿನಲ್ಲಿ ಶಿವಮೊಗ್ಗ ಜಿಲ್ಲೆಯ ಒಟ್ಟು 3,78,031 ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ₹75.60 ಕೋಟಿ ಹಣ ಸಂದಾಯವಾಗಿದೆ. ದಸರಾ ಹಬ್ಬದ ಸಂಭ್ರಮದ ವೇಳೆಯಲ್ಲಿ ಸರ್ಕಾರದ ಈ ಸಕಾಲಿಕ ಆರ್ಥಿಕ ನೆರವು ಮನೆ ಒಡತಿಯರಿಗೆ ಹೆಚ್ಚಿನ ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.