ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆ ಪ್ರಚಾರ ಸಮಿತಿ ರಚನೆ, ವಿಡಿಯೋ ಚಿತ್ರೀಕರಣ, ತಮಟೆ ಬಾರಿಸುವಂತೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 APRIL 2024

SHIMOGA : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಎಐಸಿಸಿಯಿಂದ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಬೂತ್ ಮಟ್ಟದ ಪ್ರತಿ ಮನೆಗಳಿಗೆ ತಲುಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಇವತ್ತು ಗ್ಯಾರಂಟಿ ಯೋಜನೆ ಪ್ರಚಾರ ಸಮಿತಿ ರಚಿಸಿ, ಕಾರ್ಯಕರ್ತರಿಗೆ ಬೂತ್ ಮಟ್ಟದ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಬಡ ಕುಟುಂಬ ಸದಸ್ಯರಿಗೆ ವರದಾನವಾಗಿವೆ. ಆದ್ದರಿಂದ, ಬೂತ್ ಮಟ್ಟದ ಪ್ರತಿ ಮನೆಗಳಿಗೆ ಹೋಗಿ ಮತಯಾಚಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸರ್ಕಾರದ ಋಣ ನಮ್ಮ ಮೇಲಿದೆ. ಆ ಋಣ ತೀರಿಸಲು ಅವಕಾಶ ಸಿಕ್ಕಿದೆ. ಖಂಡಿತ ಗೀತಾ ಶಿವರಾಜಕುಮಾರ್‌ ಅವರಿಗೆ ಬೆಂಬಲಿಸುವುದಾಗಿ ಮತದಾರರು ಭರವಸೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಕೇಂದ್ರ ಕಾಂಗ್ರೆಸ್ ಪಕ್ಷ ಪ್ರಣಾಳಿಯನ್ನು ಪ್ರತಿ ಮನೆಗಳಿಗೂ ತಲುಪಿಸಬೇಕು. ಯೋಜನೆಗಳ ಕುರಿತ ಅರಿವು ಮೂಡಿಸಬೇಕು. ಬೂತ್‌ ಮಟ್ಟದಲ್ಲಿ ಹಳ್ಳಿಗಳಿಗೆ ತೆರಳಿ ಗ್ಯಾರಂಟಿ ಯೋಜನೆಯ ಕರಪತ್ರ ಅಂಟಿಸಬೇಕು. ಜನರು ಮಧ್ಯವರ್ತಿಗಳಿಗೆ ಲಂಚ ನೀಡದೆ,  ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆದ್ದರಿಂದ, ಜನರಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಬೇಕು. ಇದರ ವಿಡಿಯೋ ಚಿತ್ರಿಕರಿಸಿ ಹರಿಬಿಡಬೇಕು ಎಂದರು.

ಕಾಂಗ್ರೆಸ್ ಗ್ಯಾರಂಟಿಯ ಜಿಲ್ಲಾ ಮಟ್ಟದ ಗ್ಯಾರಂಟಿ ಹಬ್ಬ ಆಚರಿಸಬೇಕು. ಇದೇ, ರೀತಿ ತಾಲ್ಲೂಕು, ಬೂತ್ ಮಟ್ಟದಲ್ಲಿಯೂ ತಮಟೆ ಭಾರಿಸುವ ಮೂಲಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ, ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ, ರಮೇಶ್ ಹೆಗ್ಡೆ, ಚಂದ್ರಭೂಪಾಲ್ ಸೇರಿ ಕಾರ್ಯಕರ್ತರು ಇದ್ದರು.ʼ

ಇದನ್ನೂ ಓದಿ – ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಸಾಗರದ ಹಕ್ರೆ ಮಲ್ಲಿಕಾರ್ಜನ್‌, ಬಿಜೆಪಿ ಸೇರ್ಪಡೆಯ ದಿನಾಂಕ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 17, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment