ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 28 SEPTEMBER 2024 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ (Guarantee) ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್ 1ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರಭೂಪಾಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಹೆಚ್.ಎಂ.ರೇವಣ್ಣ, ರಾಜ್ಯ ಉಪಾಧ್ಯಕ್ಷ ಸೂರಜ್. ಎಂ.ಎನ್.ಹೆಗಡೆ ಉಪಸ್ಥಿತರಿರಲಿದ್ದಾರೆ. ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಒಳಪಡುವ ಐದು ಇಲಾಖೆ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಧಿಕಾರಿಗಳಿಗೆ 35 ಪ್ರಶ್ನಾವಳಿ ನೀಡಲಾಗಿದ್ದು, ಸಭೆಯಲ್ಲಿ ಅದನ್ನು ಮಂಡಿಸಲಾಗುತ್ತದೆ. ಸದ್ಯ ಜಿಲ್ಲೆಯಲ್ಲಿ ಶೇ.85ರಷ್ಟು ಮಂದಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಅರ್ಹರಿದ್ದು ಯೋಜನೆ ವ್ಯಾಪ್ತಿಗೆ ಒಳಪಡದವರನ್ನು ಫಲಾನುಭವಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಮನೆ ಮನೆಗೆ ತೆರಳುವ ಯೋಜನೆ ಇದೆ ಎಂದು ಚಂದ್ರಭೂಪಾಲ್ ತಿಳಿಸಿದರು.» ಅಧಿಕಾರಿಗಳಿಗೆ 35 ಪ್ರಶ್ನಾವಳಿ
ಗೃಹ ಲಕ್ಷ್ಮಿ , ಅನ್ನಭಾಗ್ಯ ಯೋಜನೆಯ ಹಣದ ಕಂತು ಬಾಕಿ ಇರುವ ಕುರಿತು ಪತ್ರಕರ್ತರ ಪ್ರಶ್ನೆಗೆ, ಜಿಎಸ್‌ಟಿ ಕಟ್ಟುವವರು, ಆದಾಯ ತೆರಿಗೆ ಪಾವತಿದಾರರನ್ನು ಈ ಯೋಜನೆಗಳ ವ್ಯಾಪ್ತಿಯಿಂದ ಹೊರಗಿಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 3500 ಫಲಾನುಭವಿಗಳನ್ನು ಯೋಜನೆಯಿಂದ ಕೈಬಿಡಲಾಗಿದೆ ಎಂದು ತಿಳಿಸಿದರು.» ಐಟಿ, ಜಿಎಸ್‌ಟಿ ಕಟ್ಟುವವರಿಗೆ ಗ್ಯಾರಂಟಿ ಕಟ್
ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಬಿ.ಆರ್.ಶಿವಣ್ಣ, ಪ್ರಭಾ ಕೃಷ್ಣಮೂರ್ತಿ, ಅರ್ಚನಾ, ರಾಹುಲ್, ತಾಲೂಕು ಸಮಿತಿ ಅಧ್ಯಕ್ಷ ಹೆಚ್.ಎಂ.ಮಧು ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ತಡರಾತ್ರಿ ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದ ಡಾಕ್ಟರ್‌ಗೆ ಕಾದಿತ್ತು ಆಘಾತ