‘2009ರ ಸೇಡು ತೀರಿಸಿಕೊಳ್ಳುತ್ತೇವೆ, ಗ್ಯಾರಂಟಿ ಬಲ ನಮಗಿದೆʼ, ಏನಿದು ಸಚಿವರು ಹೇಳಿದ ಸೇಡಿನ ವಿಚಾರ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 3 MARCH 2024

SHIMOGA : ಬಿಜೆಪಿ ಈ ಬಾರಿ ಲೋಕಸಭಾ ಚುನಾವಣೆಯನ್ನು ಧರ್ಮ ಅಥವಾ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡು ಗೆಲ್ಲಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ನ ಗ್ಯಾರಂಟಿ ಮುಂದೆ ಅದ್ಯಾವುದೂ ನಡೆಯಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸಿದ್ದರಾಮಯ್ಯ ಅವರ ಗ್ಯಾರಂಟಿ ಮುಂದೆ ನರೇಂದ್ರ ಮೋದಿ ಗ್ಯಾರಂಟಿ ಕೊಚ್ಚಿ ಹೋಗಲಿದೆ. ಧರ್ಮ ಒಳಗೊಂಡಂತೆ ಯಾವುದೇ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಿದರೆ ಜನರು ನಂಬುವುದಿಲ್ಲ. ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಬಿಜೆಪಿಗರ ತೋಟದಲ್ಲಿ ಕೆಲಸದವರಿಗು ಗ್ಯಾರಂಟಿ

ಗ್ಯಾರಂಟಿಗಳಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಬಂದಿದೆ. ಐದು ಗ್ಯಾರಂಟಿಗಳಿಂದಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ಸರ್ಕಾರ ರಚನೆಯಾಗಿ ಐದಾರು ತಿಂಗಳಲ್ಲಿ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದರೂ ಗ್ಯಾರಂಟಿಗಳಲ್ಲಿ ಶೇ.20 ಜನರಿಗೆ ತಲುಪಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಆದರೆ ಬಿಜೆಪಿ ನಾಯಕರ ತೋಟಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೂ ಗ್ಯಾರಂಟಿ ಸಿಕ್ಕಿದೆ ಎಂದು ತಿರುಗೇಟು ನೀಡಿದರು.

ಸೋಲಿನ ಸೇಡು ತೀರಿಸಿಕೊಳ್ಳುತ್ತೇವೆ

ಎಸ್.ಬಂಗಾರಪ್ಪ ಅವರು 2009ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್ ಇಲ್ಲಿ ಗೆದ್ದಿಲ್ಲ. ಈ ಬಾರಿ ಪಕ್ಷ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ. ಚುನಾವಣೆಯಲ್ಲಿ ಇಲ್ಲಿನ ಪ್ರತಿ ಕಾರ್ಯಕರ್ತರು ಅಭ್ಯರ್ಥಿಯಾಗಿ ಕೆಲಸ ಮಾಡುತ್ತಾರೆ. ಪಕ್ಷದ ಸಂಘಟನೆ ಚೆನ್ನಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಪ್ರಬಲ ಹೋರಾಟದ ಮೂಲಕ ಬಂಗಾರಪ್ಪ ಅವರಿಗಾದ ಸೋಲಿನ ಸೇಡು ತೀರಿಸಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಚಿವ ಮಧು ಜನ್ಮದಿನ, ‘ಸ್ಪೆಷಲ್‌ ಕೇಕ್‌ನ ಸೀಕ್ರೆಟ್‌’ ಬಹಿರಂಗಪಡಿಸಿದ ನಟ ಶಿವರಾಜ್‌ ಕುಮಾರ್‌

ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್‌ಕುಮಾರ್, ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ್. ಎಂ.ಶ್ರೀಕಾಂತ್, ಎಸ್. ರವಿಕುಮಾರ್, ಎನ್.ರಮೇಶ್, ಅನಿತಾ ರವಿಶಂಕರ್, ಶ್ರೀನಿವಾಸ್ ಕರಿಯಣ್ಣ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment