ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ, ಯಾರೆಲ್ಲ ಭಾಗವಹಿಸ್ತಾರೆ? ಏನೆಲ್ಲ ಇರಲಿದೆ?

Published On : ಜನವರಿ 19, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಕಾರ್ಯಾಗಾರ (workshop) ಆಯೋಜಿಸಲಾಗಿದೆ. ಜನವರಿ 21ರಂದು ಬೆಳಗ್ಗೆ 10 ಗಂಟೆಗೆ ಗೋಪಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದೆ. ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಘಟಕದ ಅಧ್ಯಕ್ಷದ ಹೆಚ್‌.ಎಂ.ರೇವಣ್ಣ, ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಉಪಸ್ಥಿತರಿರಲಿದ್ದಾರೆ. ಶಾಸಕ ಎಸ್‌.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

190126 Guarantee Schemes workshop in Shivamogga
” ಕಾರ್ಯಾಗಾರದಲ್ಲಿ ಗ್ಯಾರಂಟಿ ಯೋಜನೆ ಸಂಬಂಧ ಸಮಸ್ಯೆಗಳಿದ್ದರೆ ಫಲಾನುಭವಿಗಳು ತಿಳಿಸಬಹುದು. ಪ್ರತಿ ಯೋಜನೆ ಸಂಬಂಧ ಪ್ರತ್ಯೇಕ ಸ್ಟಾಲ್‌ ಸ್ಥಾಪಿಸಲಾಗುತ್ತದೆ. ಆಯಾ ಯೋಜನೆ ಕುರಿತು ಮಾಹಿತಿ ಪಡೆಯಬಹುದು. ಜಿಲ್ಲೆಯ ವಿವಿಧೆಡೆ ಸುಮಾರು 2000 ಫಲಾನುಭವಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ”
ಸಿ.ಎಸ್.ಚಂದ್ರಭೂಪಾಲ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ
g1
Total-Readers-of-Shivamogga-Live

ಇದನ್ನೂ ಓದಿ » ಇಂದಿರಾ ಗಾಂಧಿ ಮುಕ್ತ ವಿವಿಗೆ ಪ್ರವೇಶ ಪ್ರಕ್ರಿಯೆ ಆರಂಭ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್‌

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 19, 2026

Leave a Comment