ಗುಡ್ಡೇಕಲ್‌ ಆಡಿಕೃತ್ತಿಕೆ ಹರೋಹರ ಜಾತ್ರೆ, ವಾಹನ ಸಂಚಾರ ಮಾರ್ಗ ಬದಲಾವಣೆ, ಯಾವ್ಯಾವ ಮಾರ್ಗದಲ್ಲಿ ನಿಷೇಧ?

ಶಿವಮೊಗ್ಗ: ಗುಡೇಕಲ್ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಗೆ ಇಂದು ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಲಿದ್ದಾರೆ. ಭಕ್ತರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಮತ್ತು ಸಂಚಾರ ದಟ್ಟಣೆ ನಿಯಂತ್ರಿಸಲು ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆಗಸ್ಟ್ 7 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಕೆಳಗಿನಂತೆ ಮಾರ್ಗ ಬದಲಾವಣೆ, ಸಂಚಾರ ನಿಷೇಧ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Guddekal-Harohara-Jathre

ಯಾವ್ಯಾವ ಮಾರ್ಗ ಬದಲಾವಣೆ?

point-1

ಬೆಂಗಳೂರು, ಭದ್ರಾವತಿ ಕಡೆಯಿಂದ ಬರುವ ವಾಹನಗಳು: ಎಲ್ಲಾ ರೀತಿಯ ಭಾರಿ ವಾಹನಗಳು, ಬಸ್, ಸಿಟಿ ಬಸ್ ಹಾಗೂ ಕಾರುಗಳು ಎಂ.ಆರ್.ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು.

point-2

ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ ಕಡೆಗೆ ಹೋಗುವ ವಾಹನಗಳು: ಎಲ್ಲಾ ಭಾರಿ ವಾಹನಗಳು, ಬಸ್‌ಗಳು ಮತ್ತು ಕಾರುಗಳು ಬೈಪಾಸ್ ರಸ್ತೆ ಹಾಗೂ ಎಂ.ಆರ್.ಎಸ್ ಸರ್ಕಲ್ ಮುಖಾಂತರ ಸಾಗಬೇಕು.

point-3

ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ವಾಹನಗಳು: ಶಿವಮೊಗ್ಗ ನಗರಕ್ಕೆ ಬರುವ ಮತ್ತು ಹೊರಹೋಗುವ ಎಲ್ಲಾ ಭಾರಿ ವಾಹನ ಹಾಗೂ ಬಸ್‌ಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು.

point-4

ಹೊಳೆಹೊನ್ನೂರಿನಿಂದ ಬರುವ ಲಘು ವಾಹನಗಳು: ಎಲ್ಲಾ ಲಘು ವಾಹನಗಳು ಪಿಳ್ಳಂಗಿರಿ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಹಾಗೂ ಹೊಳೆಬೆನವಳ್ಳಿಯಲ್ಲಿ ತಾಂದೆ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಮಲವಗೋಪ್ಪ ಮೂಲಕ ಬಿ.ಎಚ್. ರಸ್ತೆ ಸೇರಿ ಬೈಪಾಸ್ ರಸ್ತೆ ಮೂಲಕ ಶಿವಮೊಗ್ಗ ತಲುಪಬೇಕು.

point-5

ಶಿವಮೊಗ್ಗದಿಂದ ಹೊಳೆಹೊನ್ನೂರು/ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು: ದ್ವಿಚಕ್ರ ಮತ್ತು ಕಾರುಗಳು ಬೈಪಾಸ್ ರಸ್ತೆಯ ಮಲವಗೊಪ್ಪದ ಯಲವಟ್ಟಿ ಕ್ರಾಸ್‌ನಿಂದ ಯಲವಟ್ಟಿ ಹಾಗೂ ಪಿಳ್ಳಂಗಿರಿ ಕ್ರಾಸ್ ಮೂಲಕ ಹೊಳೆಹೊನ್ನೂರು-ಚಿತ್ರದುರ್ಗ ತಲುಪಬೇಕು.

point-6

ಹರಿಹರ, ಹೊನ್ನಾಳಿಯಿಂದ ಬರುವ ವಾಹನಗಳು: ಎಲ್ಲಾ ಭಾರಿ ವಾಹನ ಹಾಗೂ ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಕೆ.ಇ.ಬಿ ಸರ್ಕಲ್, ಉಷಾ ನರ್ಸಿಂಗ್ ಹೋಮ್ ಸರ್ಕಲ್, 100 ಅಡಿ ರಸ್ತೆ ಮೂಲಕ ವಿನೋಬನಗರ ಮಾರ್ಗವಾಗಿ ಸಾಗಬೇಕು.

ಹೊಳೆಹೊನ್ನೂರು ಸರ್ಕಲ್‌ನಿಂದ ಗುರುಪುರದ ಯಲವಟ್ಟಿ ಕ್ರಾಸ್ ವರೆಗೆ ಸಾರ್ವಜನಿಕ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪೊಲೀಸ್ ವಾಹನಗಳು, ಅತಿಗಣ್ಯರ ವಾಹನಗಳು, ಆಂಬುಲೆನ್ಸ್ ಹಾಗೂ ತುರ್ತು ಸೇವಾ ವಾಹನಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.