SHIVAMOGGA LIVE NEWS | SHIMOGA | 20 ಜುಲೈ 2022
ಎರಡು ವರ್ಷದ ಬಳಿಕ ಶಿವಮೊಗ್ಗದಲ್ಲಿ ಆಡಿಕೃತ್ತಿಗೆ ಜಾತ್ರೆ (ADIKRUTIKE JATHRE) ನಡೆಯುತ್ತಿದೆ. ಜಾತ್ರೆಗೆ (JATHRE) ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಗುಡ್ಡೇಕಲ್ಲು (GUDDEKALLU) ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಸ್ವಾಮಿ (BALASUBRAMANYA SWAMI) ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ನಡೆಯಲಿದೆ. ಜುಲೈ 22 ಮತ್ತು 23ರಂದು ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಇದಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ.
ಸ್ವಾಗತ ಕಮಾನು, ಫ್ಲೆಕ್ಸ್
ಜಾತ್ರೆ ಅಂಗವಾಗಿ ಸ್ವಾಗತ ಕಮಾನು, ಶುಭ ಕೋರುವ ಫ್ಲೆಕ್ಸ್’ಗಳು (FLEX) ರಾರಾಜಿಸುತ್ತಿವೆ. ಹೊಳೆಹೊನ್ನೂರು (HOLEHONNURU ROAD) ರಸ್ತೆಯಲ್ಲಿ ರೈಲ್ವೆ ಗೇಟ್ ಮುಂಭಾಗ ಸ್ವಾಗತ ಕಮಾನು ನಿರ್ಮಿಸಲಾಗಿದೆ. ಇನ್ನು, ನಗರದಾದ್ಯಂತ ಜಾತ್ರೆಗೆ ಶುಭಕೋರುವ ಫ್ಲೆಕ್ಸ್’ಗಳು ರಾರಾಜಿಸುತ್ತಿವೆ. ವಿವಿಧ ಪಕ್ಷಗಳ ರಾಜಕಾರಣಿಗಳು, ದೇವಸ್ಥಾನ ಸಮಿತಿ, ವಿವಿಧ ಸಂಘಟನೆಗಳು ಜಾತ್ರೆಗೆ ಶುಭ ಕೋರುವ ಫ್ಲೆಕ್ಸ್ ಅಳವಡಿಸಿವೆ.
ಜಾತ್ರೆಗೆ ಕೊನೆ ಹಂತದ ಸಿದ್ಧತೆ
ಗುಡ್ಡೇಕಲ್ಲು ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಳಿ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಆರಂಭವಾಗಿವೆ. ವಿವಿಧ ಮಳಿಗೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಮುಖ್ಯ ರಸ್ತೆಯಿಂದ ದೇಗುಲವನ್ನು ಸಂಪರ್ಕಿಸುವ ರಸ್ತೆಯಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತದೆ.
ಪ್ರಚಾರ ಕಾರ್ಯ ಬಿರುಸು
ಆಡಿಕೃತ್ತಿಗೆ ಜಾತ್ರೆ ಕುರಿತು ಪ್ರಚಾರ ಕಾರ್ಯ ಬಿರುಸು ಪಡೆದುಕೊಂಡಿದೆ. ಆಟೋಗಳಲ್ಲಿ ಮೈಕ್ (AUTO CAMPAIGN) ಅಳವಡಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಪ್ರತಿ ಬಡಾವಣೆಗೂ ಆಟೋ ಮೂಲಕ ತೆರಳಿ ಜಾತ್ರೆಯ ಮಾಹಿತಿ ನೀಡಲಾಗುತ್ತಿದೆ.
ಎರಡು ವರ್ಷ ಸ್ಥಗಿತವಾಗಿತ್ತು ಜಾತ್ರೆ
ಪುರಾಣ ಪ್ರಸಿದ್ಧ ಆಡಿಕೃತ್ತಿಗೆ ಜಾತ್ರೆಗೆ ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ಜನರು ಬರುತ್ತಾರೆ. ಆದರೆ ಕೋವಿಡ್ (COVID) ಕಾರಣದಿಂದಾಗಿ ಎರಡು ವರ್ಷ ಈ ಜಾತ್ರೆ ಸ್ಥಗಿತಗೊಂಡಿತ್ತು. ಲಾಕ್ ಡೌನ್ (LOCK DOWN), ಜಾತ್ರೆಗಳಿಗೆ ನಿಷೇಧ, ಹೆಚ್ಚು ಜನರು ಸೇರದಂತೆ ಪೂಜೆ ಸಲ್ಲಿಸಬೇಕು ಎಂಬ ಸರ್ಕಾರದ ಸೂಚನೆ ಹಿನ್ನಲೆ ಜಾತ್ರೆಯನ್ನು ನಿರ್ಬಂಧ ಮಾಡಲಾಗಿತ್ತು. ಈಗ ಕೋವಿಡ್ ಆತಂಕ ದೂರಾಗಿದ್ದು, ಮತ್ತೆ ವಿಜೃಂಭಣೆಯಿಂದ ಜಾತ್ರೆ ನಡೆಯುತ್ತಿದೆ.
ಲಕ್ಷ ಲಕ್ಷ ಭಕ್ತರು ಭಾಗಿಯಾಗುತ್ತಾರೆ
ಗುಡ್ಡೆಕಲ್ಲು ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಜಾತ್ರೆಯಲ್ಲಿ ಲಕ್ಷ ಲಕ್ಷ ಸಂಖ್ಯೆ ಭಕ್ತರು ಪಾಲ್ಗೊಳ್ಳುತ್ತಾರೆ. ಶಿವಮೊಗ್ಗ, ಭದ್ರಾವತಿ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳು, ಹೊರ ರಾಜ್ಯದಿಂದ ಭಕ್ತರು ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಕಾವಡಿ ಹೊತ್ತು ಹರೋ ಹರೋ (HARO HARA) ಭಜನೆ ಮಾಡುತ್ತಾ ದೇಗುಲಕ್ಕೆ ಬಂದು ಹರಕೆ ತೀರಿಸುತ್ತಾರೆ.
ದೇವಸ್ಥಾನದ ಇತಿಹಾಸವೇನು?
ಆಷಾಢ ಅಥವಾ ಶ್ರಾವಣ ಮಾಸದಲ್ಲಿ ಕೃತ್ತಿಕೆ ದಿನದಂದು ಈ ಉತ್ಸವ ಆಚರಿಸಲಾಗುತ್ತದೆ. ಮೊದಲನೆಯ ದಿನ ಭರಣಿ ಕಾವಡಿ ಅಂತಲೂ, ಎರಡನೆಯ ದಿನವನ್ನು ಆಡಿ ಕೃತ್ತಿಕೆ ಅಂತಲೂ ಆಚರಿಸಲಾಗುತ್ತದೆ. ತಮಿಳುನಾಡಿನಿಂದ ಇಲ್ಲಿಗೆ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು 80 ವರ್ಷಗಳ ಹಿಂದೆ ಈ ಸ್ಥಳದಲ್ಲಿ ಸಣ್ಣದಾದ ವಿಗ್ರಹ ಸ್ಥಾಪಿಸಿ ಪೂಜೆ ಮಾಡಲು ಆರಂಭಿಸಿದ್ದರು ಎಂಬ ಪ್ರತೀತಿ ಇದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಹೊಸ ರೈಲು, ಜುಲೈ 25ರಿಂದ ಸೇವೆ ಶುರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.