ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟೆಂಬರ್ 2021
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ವಿಧಾನ ಮಂಡಲದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿ ಪದವಿ ಕಾಲೇಜುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.
ಬೇಡಿಕೆ ಈಡೇರಿಕೆಗಾಗಿ ಸೆ.18ರವರೆಗೆ ಪ್ರತಿ ದಿನ ಒಂದು ತಾಸು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ.
ರಾಜ್ಯದ 412 ಪ್ರಥಮದರ್ಜೆ ಕಾಲೇಜುಗಳಲ್ಲಿ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರೂ ಕರೋನಾ ಸಂದರ್ಭ ಸಂಕಷ್ಟ ಎದುರಿಸಿದ್ದಾರೆ. ಜೀವನ ಭದ್ರತೆ ಇಲ್ಲವಾಗಿದೆ. ಹಲವು ತಿಂಗಳಿಂದ ಗೌರವ ಧನವೂ ಸಿಕ್ಕಿಲ್ಲ. ಸರ್ಕಾರ ಈ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರ ರಾಜ್ಯದ ಸಮನ್ವಯ ಸಮಿತಿ ಅಧ್ಯಕ್ಷ ಡಾ. ಸೋಮಶೇಖರ್ ಶಿಮೊಗ್ಗಿ, ಪ್ರಧಾನ ಕಾರ್ಯದರ್ಶಿ ಡಾ. ಎಂ.ಸಿ.ನರಹರಿ, ಖಜಾಂಚಿ ಕೆ.ರಾಜೇಶ್‌ಕುಮಾರ್, ಪ್ರಮುಖರಾದ ವಿದ್ಯಾ, ದಾಕ್ಷಾಯಿಣಿ, ಸುಜಾತಾ ಇತರರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200