ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 JANUARY 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ಮಧ್ಯೆ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್, ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಗೆ ಆಗ್ರಹಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತುಮಕೂರಿನಿಂದ ಪಾದಯಾತ್ರೆ
ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯ ಅತಿಥಿ ಉಪನ್ಯಾಸಕರ ಜೊತೆಗೆ ಶಿವಮೊಗ್ಗ ಜಿಲ್ಲೆಯ ಅತಿಥಿ ಉಪನ್ಯಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ಮಧ್ಯೆ ಸೇವೆಗೆ ಗೈರಾಗಿರುವ ಅತಿಥಿ ಉಪನ್ಯಾಸಕರ ಪಟ್ಟಿ ನೀಡುವಂತೆ ಸರ್ಕಾರ ತಿಳಿಸಿದೆ ಎಂದು ವರದಿಯಾಗಿತ್ತು.
ಜೀವನ ಭದ್ರತೆ ಬೇಕಿದೆ
ಇತ್ತ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ್, 10 ವರ್ಷ ನಿರಂತರ ಸೇವೆ ಸಲ್ಲಿಸಿ ನಿವೃತ್ತರಾಗುವ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡುವುದಾಗಿ ಹಾಗೂ ಈಗ ಪಡೆಯುತ್ತಿರುವ ಮಾಸಿಕ ವೇತನಕ್ಕೆ 5 ಸಾವಿರ ರೂ. ಸೇರಿಸಿ ಕೊಡಲಾಗುತ್ತದೆ. ವೈದ್ಯಕೀಯ ಸೌಲಭ್ಯ, ಪ್ರತಿ ತಿಂಗಳು ಒಂದು ರಜೆ ಕೊಡುವುದಾಗಿ ಸರ್ಕಾರ ಘೋಷಿಸಿದೆ. ಇದು ಸಮಾಧಾನಕರ. ಆದರೆ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆ ಒದಗಿಸುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ