‘ಪೋಷಕರೆ ಎಚ್ಚರ, ಜನವರಿ ಬಳಿಕ ಹುಷಾರ್, ಗಂಭೀರವಾಗುತ್ತೆ ನಮ್ಮ ಪ್ರೊಟೆಸ್ಟ್’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019

ಸರ್ಕಾರ ನಮ್ಮ ಹೋರಾಟವನ್ನು ಹಗುರವಾಗಿ ಪರಿಗಣಿಸಿದರೆ ಜನವರಿ ಬಳಿಕ ಗಂಭೀರ ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

1247 ಉಪನ್ಯಾಸಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಯುಜಿಸಿ ತಿಳಿಸಿದೆ. ಸೇವಾವಧಿ, ಅರ್ಹತೆ ಆಧಾರದ ಮೇಲೆ 1247 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನೆ ನೇಮಕ ಮಾಡಬೇಕು. ಅಲ್ಲದೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ವೇತನ ಹೆಚ್ಚಳ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾಂಕೇತಿಕ ಹೋರಾಟ ನಡೆಸಲಾಗುತ್ತಿದೆ. ಒಂದು ವೇಳೆ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ. ಸರ್ಕಾರ ಯಾವುದೆ ಇದ್ದರು ಅದರ ನೇತೃತ್ವವನ್ನು ನಾನೆ ವಹಿಸಿಕೊಳ್ಳುತ್ತೇನೆ ಎಂದರು.

ಜನವರಿ ನಂತರ ಪೋಷಕರೆ ಎಚ್ಚರ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸದಿದ್ದರೆ ಜನವರಿ ಬಳಿಕ ಹೋರಾಟ ಗಂಭೀರ ಸ್ವರೂಪ ಪಡೆಯಲಿದೆ. ರಾಜ್ಯದ 412 ಕಾಲೇಜುಗಳಲ್ಲಿ ಶೇ.75ರಷ್ಟು ಅತಿಥಿ ಉಪನ್ಯಾಕರು ಇದ್ದಾರೆ. ಇವರೆಲ್ಲ ಜನವರಿ ಬಳಿಕ ಕಾಲೇಜುಗಳಿಂದ ಹೊರಗೆ ಬರಲಿದ್ದಾರೆ. ಪರೀಕ್ಷೆಗಳು ಹತ್ತಿರದಲ್ಲಿರುವ ಸಂದರ್ಭ, ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment