ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಡಿಸೆಂಬರ್ 2021
ಟೀ ಮಾರುವ ಮೂಲಕ ಅತಿಥಿ ಉಪನ್ಯಾಸಕರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೋರಾಟ ಕೈಗೊಳ್ಳಲಾಯಿತು.
![]() |
ಬೇಡಿಕೆ ಈಡೇರಿಸುವಂತೆ ಕಳೆದ ಆರು ದಿನಗಳಿಂದ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ಟೀ ಮಾರಿ ಗಮನ ಸೆಳೆದರು. ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ ಎಂದು ಆರೋಪಿಸಿದರು.
ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಅತಿಥಿ ಉಪನ್ಯಾಸಕರ ಸೇವೆಯನ್ನು ನಿಯಮ 14ರ ಅಡಿಯಲ್ಲಿ ವಿಲೀನಗೊಳಿಸಬೇಕು. ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು. ಸೇವಾ ವಿಲೀನ ಪ್ರಕ್ರಿಯೆ ಪೂರ್ಣಗೊಳಿಸುವವರೆಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಡಾ. ಎಚ್.ಸೋಮಶೇಖರ್ ಶಿಮೊಗ್ಗಿ, ಜಿಲ್ಲಾಧ್ಯಕ್ಷ ಸರ್ವಜ್ಞಮೂರ್ತಿ, ಖಜಾಂಚಿ ರಾಜೇಶ್‌ಕುಮಾರ್, ಪ್ರಮುಖರಾದ ಚಂದ್ರಪ್ಪ, ಸತೀಶ್ ಕುಮಾರ್, ಧನಂಜಯಸ್ವಾಮಿ, ರೂಪಾ, ಡಾ.ಅನ್ನಪೂರ್ಣಾ, ದೀಪಾ, ಕೋಮಲಾ, ಡಾ. ಶೀಲಾ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200