ಶಿವಮೊಗ್ಗ ಡಿಸಿ ಕಚೇರಿ ಮುಂದೆ ಟೀ ಮಾರಿದ ಅತಿಥಿ ಉಪನ್ಯಾಸಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021

ಟೀ ಮಾರುವ ಮೂಲಕ ಅತಿಥಿ ಉಪನ್ಯಾಸಕರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೋರಾಟ ಕೈಗೊಳ್ಳಲಾಯಿತು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಬೇಡಿಕೆ ಈಡೇರಿಸುವಂತೆ ಕಳೆದ ಆರು ದಿನಗಳಿಂದ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ಟೀ ಮಾರಿ ಗಮನ ಸೆಳೆದರು. ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ ಎಂದು ಆರೋಪಿಸಿದರು.

ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಅತಿಥಿ ಉಪನ್ಯಾಸಕರ ಸೇವೆಯನ್ನು ನಿಯಮ 14ರ ಅಡಿಯಲ್ಲಿ ವಿಲೀನಗೊಳಿಸಬೇಕು. ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು. ಸೇವಾ ವಿಲೀನ ಪ್ರಕ್ರಿಯೆ ಪೂರ್ಣಗೊಳಿಸುವವರೆಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಡಾ. ಎಚ್.ಸೋಮಶೇಖರ್ ಶಿಮೊಗ್ಗಿ, ಜಿಲ್ಲಾಧ್ಯಕ್ಷ ಸರ್ವಜ್ಞಮೂರ್ತಿ, ಖಜಾಂಚಿ ರಾಜೇಶ್‌ಕುಮಾರ್, ಪ್ರಮುಖರಾದ ಚಂದ್ರಪ್ಪ, ಸತೀಶ್‌ ಕುಮಾರ್‌, ಧನಂಜಯಸ್ವಾಮಿ, ರೂಪಾ, ಡಾ.ಅನ್ನಪೂರ್ಣಾ, ದೀಪಾ, ಕೋಮಲಾ, ಡಾ. ಶೀಲಾ ಇತರರಿದ್ದರು.

AVvXsEiNLsNKnJsI0vzrbNL4Sw3YgLt1L6yDBmmjb tifVIhNXkgV gNKZTFxFpk SDxqp0tocdzie dVHyb2QGFkDhgb4yPyFc8oZIlEP2dSJ983yalhs CEEn3Wimbr AXc6q4uHxS11Am93C7gipEd46QZQyyRzvQxstB4bOzSYkykvRYhL2lv40 oPM04Q=s1920

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment