ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ತಮಟೆ ಚಳವಳಿ ನಡೆಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮೆರವಣಿಗೆ, ಮಾನವ ಸರಪಳಿ
ಜಿಲ್ಲೆಯ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಚಳವಳಿ ಮಾಡುತ್ತ ಮೆರವಣಿಗೆ ನಡೆಸಿದರು. ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ಮಾಡಿದರು.
ಸೇವೆ ಕಾಯಂಗೆ ಬಿಗಿ ಪಟ್ಟು
ರಾಜ್ಯದ ಸುಮಾರು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11 ಸಾವಿರಕ್ಕಿಂತಲು ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. 25 ವರ್ಷದಿಂದ ಕೆಲಸ ಮಾಡುತ್ತಿದ್ದರು ಸೇವೆ ಕಾಯಂಗೊಂಡಿಲ್ಲ. ಪ್ರತಿಭಟನೆ ನಡೆಸಿದಾಗಲೆಲ್ಲ ವೇತನದಲ್ಲಿ ತುಸು ಹೆಚ್ಚಳ ಮಾಡಲಾಗುತ್ತಿದೆ. ಇದರಿಂದ ತಮಗೆ ಸೇವಾ ಭದ್ರತೆ ಇಲ್ಲವಾಗಿದೆ ಎಂದು ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಬಗರ್ ಹುಕುಂ ಆ್ಯಪ್ ಬಿಡುಗಡೆ ಮಾಡಿದ ಮಿನಿಸ್ಟರ್, ಏನಿದು ಆ್ಯಪ್? ಹೇಗೆ ಕೆಲಸ ಮಾಡುತ್ತದೆ?
ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾಗ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವುದಾಗಿ ತಿಳಿಸಿದ್ದರು. ಆದರೆ ಡಿಸೆಂಬರ್ 1ರಂದು ಉನ್ನತ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಸೇವೆ ಕಾಯಂ ಮಾಡುವ ವಿಚಾರ ಅಲ್ಲಗಳೆದಿದ್ದಾರೆ. ಆದ್ದರಿಂದ ತರಗತಿ ಬಹಿಷ್ಕರಿಸಿ ಮುಷ್ಕರ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು.
ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾದ್ಯಕ್ಷ ಹನುಮಂತ ಗೌಡ ಕಲ್ಮನೆ, ಜಿಲ್ಲಾಧ್ಯಕ್ಷ ರಮೇಶ್ ರಾವ್ ಬರ್ಗೆ, ರವಿ, ಪೂರ್ಣೇಶ್, ಸಂಪತ್, ಯಶೋಧರ, ಶಾಲಿನಿ, ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.