ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವ ವಿಚಾರ ಸದನದಲ್ಲಿ ಚರ್ಚೆಯಾಗದೆ, ಸ್ಪಷ್ಟ ನಿರ್ಧಾರ ಪ್ರಕಟವಾಗದೇ ನಿರಾಶೆಯಾಗಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಾ.ಸೋಮಶೇಖರ್ ಶಿಮೊಗ್ಗಿ ಬೇಸರ ವ್ಯಕ್ತಪಡಿಸಿದ್ದಾರೆ.
![]() |
https://www.facebook.com/liveshivamogga/videos/2815887715397558/?t=16
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಶೇಖರ್ ಶಿಮೊಗ್ಗಿ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ವಿಚಾರ ಕೂಡಲೇ ಸಂಪುಟ ಸಮಿತಿಗೆ ತರಲು ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಉದ್ಯೋಗ ಭದ್ರತೆ ಮತ್ತು ಲಾಕ್ ಡೌನ್ ಅವಧಿ ವೇತನ ನೀಡುವಂತೆ ೧೧ ವಾರ ರಾಜ್ಯಾದ್ಯಂತ ಮುಷ್ಕರ ನಡೆಸಲಾಯಿತು. ಈ ಬಾರಿಯ ಅಧಿವೇಶನದಲ್ಲಿ ಸೇವಾ ಭದ್ರತೆ ವಿಚಾರ ಚರ್ಚೆಯಾಗದೇ ಕೇವಲ ಬಾಕಿ ವೇತನ ಕೊಡಿಸುವುದಕ್ಕೆ ವಿಧಾನಪರಿಷತ್ ಸದಸ್ಯರು ಚರ್ಚೆ ಸೀಮಿತಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದರು.
ಬಹುನಿರೀಕ್ಷೆ ಇಟ್ಟು ಪರಿಷತ್ ಚುನಾವಣೆಯಲ್ಲಿ ನಾವು ಅವರಿಗೆ ಮತ ನೀಡಿದ್ದೆವು.ಈಗ ನಮಗೆ ನಿರಾಶೆಯಾಗಿದೆ. ಮತ್ತೊಮ್ಮೆ ಪರಿಷತ್ ಸದಸ್ಯರು ಅತಿಥಿ ಉಪನ್ಯಾಸಕರ ಹಿತ ಕಾಪಾಡುವಲ್ಲಿ ಹಿಂದೆ ಸರಿದಿರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದರು.
ಕೋವಿಡ್-೧೯ ಕಾರಣಕ್ಕೆ ಈ ಬಾರಿ ಕಾಲೇಜುಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ತರಗತಿ ಆರಂಭ ಅಸ್ಪಷ್ಟವಾಗಿಲ್ಲ. ಆನ್‌ಲೈನ್ ತರಗತಿಗೆ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದೆ. ಆದರೆ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಸೇವೆಯನ್ನು ೨೦೨೦-೨೧ನೇ ಸಾಲಿಗೆ ನೇಮಿಸಿಕೊಂಡಿಲ್ಲ. ಕೂಡಲೇ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಮಧ್ಯ ಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಂ.ಸಿ.ನರಹರಿ, ಎಂ.ಆರ್.ಶಿವಕುಮಾರ್ ಅಸ್ತಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200