SHIVAMOGGA LIVE NEWS | 24 FEBRURARY 2023
SHIMOGA : ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಕಡ್ಡಾಯ ಸೂಚನೆ (Guideline) ಹೊರಡಿಸಿದೆ.
ಏನೇನು ಸೂಚನೆ ಪಾಲಿಸಬೇಕು?
ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಮೊಬೈಲ್ ಫೋನ್, ಪರ್ಸ್ ಗಳನ್ನು ತರಲು ಅವಕಾಶವಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನೀರಿನ ಬಾಟಲಿ, ಬ್ಯಾಗ್, ಪೇಪರ್ (ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ / ಶರ್ಟ್ / ಕರವಸ್ತ್ರಗಳು, ಇತರೆ ವಸ್ತು ತರುವಂತಿಲ್ಲ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬದಲಿ ಮಾರ್ಗದ ವ್ಯವಸ್ಥೆ
ಸುಗಮ ಸಂಚಾರ ಹಾಗೂ ಸಂಚಾರ ನಿಯಂತ್ರಣದ ಹಿನ್ನೆಲೆ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮತ್ತು ವಾಹನಗಳನ್ನು ಹೊರತು ಪಡಿಸಿ ಉಳಿದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಬೇಕು.
ಇತರೆ KSRTC, ಖಾಸಗಿ ಬಸ್ ಗಳು ಮತ್ತು ಇತರೆ ಯಾವುದೇ ವಾಹಾನಗಳಲ್ಲಿ ಪ್ರಯಾಣ ಬೆಳಸುವ ಪ್ರಯಾಣಿಕರು, ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯನ್ನು ಹೊರತು ಪಡಿಸಿ, ಬದಲಿ ಮಾರ್ಗದಲ್ಲಿಯೇ ಪ್ರಯಾಣಿಸಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.