ಶಿವಮೊಗ್ಗದ ಮಾಜಿ ಶಾಸಕ ಹೆಚ್‌.ಎಂ.ಚಂದ್ರಶೇಖರಪ್ಪ ನಿಧನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪಾರ್ಥೀವ ಶರೀರವನ್ನು ಇಂದು ರಾತ್ರಿ ವೇಳೆಗೆ ಶಿವಮೊಗ್ಗಕ್ಕೆ ತರುವ ಸಾಧ್ಯತೆ ಇದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸ್ಪರ್ಧಿಸಿ 1999ರಲ್ಲಿ ಹೆಚ್‌.ಎಂ.ಚಂದ್ರಶೇಖರಪ್ಪ ಗೆಲುವು ಸಾಧಿಸಿ ಶಿವಮೊಗ್ಗ ನಗರದ ಶಾಸಕರಾಗಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿ, ವೀರಶೈವ-ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಹಾಗೂ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ.

Former-MLA-of-Shimoga-HM-Chandrashekarappa-No-more.