ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021
ಕೊರೊನಾದಿಂದಾಗಿ ಗುಡ್ಡೆಕಲ್ ಬಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಆಡಿಕೃತ್ತಿಕೆ ಹರೋಹರ ಜಾತ್ರೆ ರದ್ದು ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಪಿ.ರಘುಕುಮಾರ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಂಡಳಿ, ಜಾತ್ರೆಗೆ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ. ಹರಕೆ ತೀರಿಸಲು ಕಾವಡಿ ಹೊತ್ತು ಬರುತ್ತಾರೆ. ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜಾತ್ರೆ ಸೇರುವುದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ಜಾತ್ರೆ ರದ್ದುಗೊಳಿಸಲಾಗಿದೆ.
ಆಗಸ್ಟ್ 1 ಮತ್ತು 2 ರಂದು ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಭಕ್ತರು ಹರಕೆ ತೀರಿಸಲು ದೇವಸ್ಥಾನಕ್ಕೆ ಬರಬಾರದು. ಪೂಜೆ ಪುನಸ್ಕಾರಗಳನ್ನು ಮನೆಯಲ್ಲಿಯೇ ನೆರವೇರಿಸಬೇಕೆಂದು ವಿನಂತಿಸಿದ್ದಾರೆ.
ಆಡಿಕೃತ್ತಿಕೆ ಹರೋಹರ ಜಾತ್ರೆಗೆ ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದರು. ಕಾವಡಿಗಳನ್ನು ಹೊತ್ತು, ಹರೋಹರ ಘೋಷಣೆಗಳೊಂದಿಗೆ ಪಾದಯಾತ್ರೆ ಮಾಡುತ್ತಿದ್ದರು. ಕೆಲವರು ಬಾಯಿಗೆ ತ್ರಿಶೂಲಗಳನ್ನು ಚುಚ್ಚಿಕೊಂಡು ನಡೆದು ಬರುತ್ತಿದ್ದರು. 20 ಅಡಿವರೆಗೂ ತ್ರಿಶೂಲ ಚುಚ್ಚಿಕೊಂಡು ನಡೆಯುತ್ತಿದ್ದರು. ಗಡ್ಡೇಕಲ್ಲು ಬಾಲಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಕಾವಡಿಗಳನ್ನು ಇಳಿಸಿ, ತ್ರಿಶೂಲಗನ್ನು ತೆಗೆದು ಪೂಜೆ ಸಲ್ಲಿಸಿ, ಹರಕೆ ತೀರಿಸುತ್ತಿದ್ದರು. ಜಾತ್ರೆ ಸಂದರ್ಭ ಹೊಳೆಹೊನ್ನೂರು ರಸ್ತೆ ಸಂಪೂರ್ಣ ಬಂದ್ ಆಗುತ್ತಿತ್ತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200