SHIVAMOGGA LIVE NEWS | 28 MAY 2024
SHIMOGA : ಪ್ರಜ್ವಲ್ ರೇವಣ್ಣನನ್ನು ಕೂಡಲೆ ಬಂಧಿಸಬೇಕು ಎಂದು ಅಗ್ರಹಿಸಿ ಮೇ 30ರಂದು ಹಾಸನ ಚಲೋ (Hassan Chalo) ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಹಲವು ಸಂಘಟನೆಗಳು ಪ್ರತಭಟನೆಯಲ್ಲಿ ಭಾಗವಹಿಸಲಿವೆ ಎಂದು ಹಾಸನ ಚಲೋ ಸಂಚಾಲಕ ಕೆ.ಪಿ.ಶ್ರೀಪಾಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್, ಅಂದು ಬೆಳಗ್ಗೆ ಮಹಾರಾಜ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇರುವ ಮಾಹಿತಿ ಇದ್ದರೂ ಆತನನ್ನು ಬಂಧಿಸಲು ಸಾಧ್ಯವಾಗಿಲ್ಲ. ಈಗ ಆತ ವಿಡಿಯೋ ಬಿಡುಗಡೆ ಮಾಡಿ ಕುಟುಂಬದವರ ಕ್ಷಮೆ ಮಾತ್ರ ಕೇಳಿದ್ದಾನೆ. ವಾಸ್ತವದಲ್ಲಿ ರಾಜ್ಯದ ಜನರ ಕ್ಷಮೆಯಾಚಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
10 ಸಾವಿರಕ್ಕೂ ಹೆಚ್ಚು ಜನರು ಭಾಗಿ
ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್ ಮಾತನಾಡಿ, ಈ ಅಸಭ್ಯ, ಅಶ್ಲೀಲ, ಅನಾಗರಿಕ ಕ್ರೂರತೆ ಖಂಡಿಸಿ ರಾಜ್ಯಾದ್ಯಂತ ಹಾಸನ ಚಲೋ ಹಮ್ಮಿಕೊಳ್ಳಲಾಗಿದೆ. ರೈತ ಸಂಘಟನೆಗಳು, ಮಹಿಳಾ ವೇದಿಕೆಗಳು, ವಿವಿಧ ಸಾಹಿತಿಗಳು, ನಿವೃತ್ತ ನ್ಯಾಯಮೂರ್ತಿಗಳು, ಚಿಂತಕರು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ. ಸುಮಾರು 10 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹಾಲೇಶಪ್ಪ, ನಾರಾಯಣ್, ಪ್ರಭಾಕರ್, ಹನುಮಕ್ಕ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಐಡಿ ಅಧಿಕಾರಿಗಳು, ಪೆನ್ ಡ್ರೈವ್ ವಶಕ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200