ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌

ಶಿವಮೊಗ್ಗ
LIVE

ಶಿವಮೊಗ್ಗ: ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ (Shimoga) ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನ.29ರಂದು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shimoga Airport) ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆವರೆಗೆ VISL ಕಾರ್ಖಾನೆಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಸಂಜೆ 6.15ಕ್ಕೆ ಶಾರದಾ ಅಪ್ಪಾಜಿಗೌಡ ಅವರ ಮನೆಗೆ ಭೇಟಿ ನೀಡಲಿದ್ದಾರೆ. ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರ ಮನೆಗೆ ಭೇಟಿ ನೀಡಲಿದ್ದಾರೆ. ರಾತ್ರಿ 8.15ಕ್ಕೆ ಕಿಮ್ಮನೆ ಗಾಲ್ಫ್‌ ರೆಸಾರ್ಟ್‌ಗೆ ತೆರಳಲಿದ್ದು ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

hd-kumaraswamy-visit-to-visl-in-bhadravathi

ನ.30ರಂದು ಬೆಳಗ್ಗೆ ಕಿಮ್ಮನೆ ಗಾಲ್ಫ್‌ ರೆಸಾರ್ಟ್‌ನಲ್ಲಿ ಎನ್.ಎನ್.ಚಂದ್ರಶೇಖರ್‌ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10.15ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಶ್ರೀ ಭಗವದ್ಗೀತ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಶಿವಮೊಗ್ಗ ಜೆಡಿಎಸ್‌ ಕಚೇರಿಗೆ ತೆರಳಲಿದ್ದು, ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಬರ್ತಿದ್ದಾರೆ ಕೇರಳ ರಾಜ್ಯಪಾಲರು, ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment