ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS, 17 JANUARY 2025
ಶಿವಮೊಗ್ಗ : ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, ಟಿಎಂಎಇಎಸ್, ಜಿಲ್ಲಾಡಳಿತ, ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಆರೋಗ್ಯ ಉಚಿತ ತಪಾಸಣೆ (Health Camp) ಶಿಬಿರವನ್ನು ಜ.18ರಂದು ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10.30ರಿಂದ ಹಮ್ಮಿಕೊಳ್ಳಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಹಿರಿಯ ವರದಿಗಾರ ರಾಮಚಂದ್ರ ಗುಣಾರಿ ತಿಳಿಸಿದರು.
ಆಯುರ್ವೇದ, ಪಾರಂಪರಿಕ ವೈದ್ಯ ಪದ್ದತಿ, ಹೋಮಿಯೋಪತಿ, ಯುನಾನಿ ವೈದ್ಯ ಪದ್ಧತಿಯಲ್ಲಿ ತಪಾಸಣೆ, ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ತಮ್ಮ ಇಚ್ಚೆಯ ವೈದ್ಯ ಪದ್ಧತಿಯಲ್ಲಿ ತಪಾಸಣೆಗೆ ಒಳಗಾಗಬಹುದು. ಉಚಿತ ಔಷಧಿಯನ್ನು ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯ ಪಾರಂಪರಿಕ ವೈದ್ಯ ಪರಿಷತ್‌ನ ಅಧ್ಯಕ್ಷ ರಾಜು ಪಂಡಿತ್, ಡಾ.ಧಾತ್ರಿ ದತ್ತ, ಡಾ. ಅರ್ಪಿತಾ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಸಚಿವ ಎಂ.ಬಿ.ಪಾಟೀಲ್ ಮಹತ್ವದ ಹೇಳಿಕೆ, ಏನಂದ್ರು?

