ಶಿವಮೊಗ್ಗ: ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮದಿನ. ಇದರ ಅಂಗವಾಗಿ ದೇಶದಲ್ಲಿ ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ ಪ್ರಾರಂಭಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲು ಈ ಆರೋಗ್ಯ ಅಭಿಯಾನ (Health Camps) ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿಂದ ಅ.2ರಂದು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದವರೆಗೆ ಈ ಅಭಿಯಾನ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಏಳು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಭಿಯಾನಕ್ಕೆ ದಿನಾಂಕ ನಿಗದಿಯಾಗಿದೆ ಎಂದರು.
ಸಂಸದರ ಪತ್ರಿಕಾಗೋಷ್ಠಿಯ ಹೈಲೈಟ್ ಪಾಯಿಂಟ್ಸ್
ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನದ ಮೂಲಕ ಆರೋಗ್ಯ ಅಭಿಯಾನ ಆಯೋಜಿಸಲಾಗಿದೆ. ಕುಟುಂಬ, ಸಮುದಾಯ ಮತ್ತು ರಾಷ್ಟ್ರದ ಪ್ರಗತಿಗೆ ಮಹಿಳೆಯರ ಆರೋಗ್ಯ ಹಾಗೂ ಸಬಲೀಕರಣದ ಗುರಿಯೊಂದಿಗೆ ಈ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.
ಮಧ್ಯಪ್ರದೇಶದ ಇಂಧೋರ್‌ನಲ್ಲಿ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಇಡೀ ದೇಶಾದ್ಯಂತ ಆರೋಗ್ಯ ಸೇವೆಗಳಿಗೆ ಚಾಲನೆ ನೀಡಲಾಗುತ್ತದೆ.
ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ತುಂಗಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್‌ಇಡಿ ಪರದೆ ಅಳವಡಿಸಿ ಅಭಿಯಾನದ ವೆಬ್‌ಕಾಸ್ಟ್ ನಡೆಯಲಿದೆ. ಎಲ್ಲ ಪಿಹೆಚ್‌ಸಿಗಳಲ್ಲಿ ಟಿವಿಗಳಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬೇಕು.
ಅ.2ರವರೆಗೆ ದೇಶಾದ್ಯಂತ ಆಯುಷ್ಮಾನ್ ಆರೋಗ್ಯ ಮಂದಿರ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಶಿಬಿರಗಳು ನಡೆಯಲಿವೆ.
ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಯಾವಾಗ ಶಿಬಿರ?

ಸಂಸದ ಬಿ.ವೈ.ರಾಘವೇಂದ್ರ ಅವರ ಜೊತೆಗೆ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್.![]()
ಜಿಲ್ಲೆಯ 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಣೆಗೆ ದಿನಾಂಕ ನಿಗದಿಯಾಗಿದೆ. ಗರ್ಭ ಆರೋಗ್ಯ ತಪಾಸಣೆ, ಕ್ಯಾನ್ಸರ್ ತಪಾಸಣೆ, ರಕ್ತದಾನ, ದಂತ ಚಿಕಿತ್ಸೆ ನಡೆಸಲಾಗುತ್ತದೆ. ಸೆ.17ರಂದು ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ, ಸೆ.19ರಂದು ಆನಂದಪುರ, ಸೆ.22ರಂದು ಶಿರಾಳಕೊಪ್ಪ, ಸೆ.24ರಂದು ಆಯನೂರು, ಸೆ.26ರಂದು ಹೊಳಲೂರು ಮತ್ತು ಕನ್ನಂಗಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ನಡೆಯಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲಾಧ್ಯಕ್ಷ ಜಗದೀಶ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ, ಮುಸ್ಲಿಂ ಯುವಕರಿಂದಲೇ ಡಿಜೆ, ಡಾನ್ಸ್‌ಗೆ ವಿರೋಧ
Health Camps in Shivamogga district
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





