SHIMOGA | ಸೋನಿಯಾ ಗಾಂಧಿ ಬರ್ತಡೆ, ಸಾವಿರ ಸಾವಿರ ಜನರಿಗೆ ಫ್ರೀ ಆರೋಗ್ಯ ತಪಾಸಣೆ, ಚಿಕಿತ್ಸೆ ಎಲ್ಲಿ? ಯಾವಾಗ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 03 ಡಿಸೆಂಬರ್ 2019

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಯವರ 73ನೇ ಜನ್ಮದಿನಾಚರಣೆ ಅಂಗವಾಗಿ ಡಿ.8ರ ಬೆಳಿಗ್ಗೆ 9.30 ರಿಂದ ಸಂಜೆ 5ರವರೆಗೆ ಶ್ರೀ ಆದಿಚುಂಚನಗಿರಿ ಶಾಲಾ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಬೆಂಗಳೂರಿನ ನಾರಾಯಣ ಹೃದಯಾಲಯ, ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ, ಶರಾವತಿ ದಂತ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನುರಿತ ವೈದ್ಯರು ತಪಾಸಣೆ ನಡೆಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಸಮಿತಿಯ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಎನ್.ರಾಘವೇಂದ್ರ, ಜಿಲ್ಲಾಧ್ಯಕ್ಷ ಡಾ. ಕ್ಸೆವಿಯರ್ ಪ್ರದೀಪ್ ಡಿಮೆಲ್ಲೊ ಇವರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಏನೆಲ್ಲ ಪರೀಕ್ಷೆ ನಡೆಸಲಿದ್ದಾರೆ?

ಹೃದಯ, ಮೂಳೆ, ನರರೋಗ, ಕಣ್ಣು, ಕಿವಿ, ಮೂಗು, ಗಂಟಲು, ದಂತ, ಥೈರಾಯ್ಡ್, ಸ್ತ್ರೀರೋಗಕ್ಕೆ ಸಂಬಂಧಿಸಿದ ತಪಾಸಣೆ ಹಾಗೂ ಚಿಕಿತ್ಸೆ, ವ್ಯಾಸ್ಕುಲರ್ ಸರ್ಜರಿ, ಜನರಲ್ ಮೆಡಿಸಿನ್, ಇಸಿಜಿ, ಎಕೋ, ಮೆಮೊಗ್ರಪಿ ಬಗ್ಗೆ ತಪಾಸಣೆ ನಡೆಯಲಿದೆ. ಚಿಕಿತ್ಸೆಯ ಅವಶ್ಯವಿದ್ದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಚಿತವಾಗಿ ಚಿಕಿತ್ಸೆ ಮಾಡಿಸಿಕೊಡಲಾಗುವುದು ಎಂದರು.

78339433 990006864694067 912947066005618688 n.jpg? nc cat=109& nc ohc=glPdYS5mWegAQkaYlYb2KWQ5 bNKn9VVRY Sdmag62uW4WapiLlX9Sasw& nc ht=scontent.fblr11 1

ಎರಡು ಸಾವಿರ ಜನರಿಗೆ ತಪಾಸಣೆ

ಉಚಿತ ತಪಾಸಣೆ ಮತ್ತು ಚಿಕಿತ್ಸೆಯನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ ಹೆಚ್.ಎಸ್.ಸುಂದರೇಶ್, ಎರಡು ಸಾವಿರ ಜನರು ಈ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.

ಪ್ರಮುಖರಾದ ಇಸ್ಮಾಯಿಲ್ ಖಾನ್, ಎಲ್.ರಾಮೇಗೌಡ, ಹೆಚ್.ಎಂ.ಚಂದ್ರಶೇಖರಪ್ಪ, ಮುಕ್ತಿಯಾರ್ ಅಹಮ್ಮದ್, ಎಸ್.ಪಿ.ಶೇಷಾದ್ರಿ, ರೇಖಾ ರಂಗನಾಥ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Shimoga District Congress Party has organized a Health checkup camp for two thousand people said the district President HS Sundaresh.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment