ಶಿವಮೊಗ್ಗ: ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ ಪಾಯಿಂಟ್ಸ್
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಚಿವರು ಏನೇನು ಸೂಚಿಸಿದರು?
ತಾಯಿ ಮತ್ತು ಮಗು ಮರಣ ಪ್ರಮಾಣ ರಾಜ್ಯದ ಸರಾಸರಿಗಿಂತ ಜಿಲ್ಲೆಯಲ್ಲಿ ಹೆಚ್ಚಿದೆ. ಅದನ್ನು ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಿ. ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಲಿಂಗಾನುಪಾತ ಕಡಿಮೆ ಇದೆ. ಅದಕ್ಕೆ ಕಾರಣ ತಿಳಿದು ಸಮತೋಲನವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಹೈ ರಿಸ್ಕ್ ಗರ್ಭಿಣಿಯರ ಗುರುತಿಸುವ ಕಾರ್ಯ ಶೇ 100ರಷ್ಟು ಆಗಬೇಕು. ಎಎನ್‌ಸಿ ನೋಂದಣಿ ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಆಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಸಿಎಚ್‌ಸಿಗಳಲ್ಲಿ ಹೆರಿಗೆ ಪ್ರಮಾಣ ಕಡಿಮೆ ಇದೆ. ಹೆರಿಗೆ ಅತಿ ಕಡಿಮೆ ಇರುವ ಸಿಎಚ್‌ಸಿಯಿಂದ ಪ್ರಸೂತಿ ಮತ್ತು ಅರವಳಿಕೆ ತಜ್ಞ ವೈದ್ಯರನ್ನು ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸಿ 24X7 ಕೆಲಸ ಮಾಡುವಂತೆ ಕ್ರಮವಹಿಸಬೇಕು. ತಾಲ್ಲೂಕು ಆಸ್ಪತ್ರೆಗಳನ್ನು ಹೆಚ್ಚಿನ ಮಟ್ಟದಲ್ಲಿ ಸುಧಾರಣೆ ಮಾಡಬೇಕು. ಆಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೂ ಹೊರೆ ಕಡಿಮೆ ಆಗುತ್ತದೆ. ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಇಬ್ಬರು ಪ್ರಸೂತಿ ಮತ್ತು ಅರೆವಳಿಕೆ ತಜ್ಞರನ್ನು ನೇಮಕ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಎಎಂಪಿಕೆ (ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ) ಕಾರ್ಯಕ್ರಮದಡಿ 5 ರಿಂದ 19 ವರ್ಷದೊಳಗಿನ ಶಾಲೆ- ಕಾಲೇಜಿನ 1,14,196 ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದೆ. ಅವರಲ್ಲಿ ಶೇ 6.5 ರಷ್ಟು ತೀವ್ರವಲ್ಲದ (ಮೈಲ್ಡ್), ಶೇ 5.7ರಷ್ಟು ಮಧ್ಯಮ (ಮಾಡರೇಟ್) ಮತ್ತು ಶೇ 0.04 ತೀವ್ರ (ಸೀವಿಯರ್) ಅನೀಮಿಯಾ ಪತ್ತೆಯಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಮುಗಿಸಿ ಮುಂದಿನ ತಿಂಗಳೇ ಆ ಬಗ್ಗೆ ವರದಿ ಕೊಡಿ ಎಂದು ತಾಕೀತು ಮಾಡಿದರು.
ಇದನ್ನೂ ಓದಿ » ಸೌಂದರ್ಯ ವರ್ಧನೆ, ಕೂದಲು ಕಸಿ ಮಾಡಿಸಿಕೊಳ್ಳುವವರೆ ಹುಷಾರ್, ಶಿವಮೊಗ್ಗದಲ್ಲಿ ವೈದ್ಯರ ಎಚ್ಚರಿಕೆ
ನಮ್ಮ ಕ್ಲಿನಿಕ್’ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. 14 ಆರೋಗ್ಯ ಸಮಸ್ಯೆಗಳನ್ನು ತಪಾಸಣೆಗೊಳಪಡಿಸಿ ರೋಗಿಗಳಿಗೆ ದೀರ್ಘಕಾಲದ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಗೃಹ ಆರೋಗ್ಯ ಕಾರ್ಯಕ್ರಮ ಆರಂಭಿಸಲಾಗಿದೆ. ಬೇರೆ ಯಾವ ರಾಜ್ಯದಲ್ಲೂ ಇಂತಹ ಕಾರ್ಯಕ್ರಮ ಇಲ್ಲ. ಮನೆ ಮನೆಗೆ ತೆರಳಿ ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಈ ವೇಳೆ ಸಕ್ಕರೆ ಕಾಯಿಲೆ ಮತ್ತು ಹೈಪರ್ ಟೆನ್ಶನ್ ಸಮಸ್ಯೆಗಳನ್ನು ಸಮರ್ಪಕವಾಗಿ ಸ್ಕ್ರೀನಿಂಗ್ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಎನ್‌ಸಿಡಿ ಉಪನಿರ್ದೇಶಕ ಡಾ.ರಘುನಂದನ್, ಡಿಎಚ್ಒ ಡಾ.ನಟರಾಜ್, ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ಗುಡುದಪ್ಪ ಕಸಬಿ, ಡಿಎಸ್ಒ ಡಾ.ನಾಗರಾಜ ನಾಯ್ಕ, ಆರ್‌ಸಿಎಚ್ಒ ಡಾ.ಮಲ್ಲಪ್ಪ, ಡಿಎಲ್ಒ ಡಾ.ಕಿರಣ್ ಹಾಜರಿದ್ದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





