NEWS HIGHLIGHTS
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಜುಲೈ 10 ಹಾಗೂ 11ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಜುಲೈ 10ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಹೊರಡಲಿರುವ ಸಚಿವರು, ಜುಲೈ 11ರ ಮುಂಜಾನೆ 3 ಗಂಟೆಗೆ ಶಿವಮೊಗ್ಗ ತಲುಪಿ ಸರ್ಕಾರಿ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಂತರ ಜುಲೈ 11ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಿ.ವಿ.ಎಸ್. ಶಾಲಾ ಸಭಾಂಗಣದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ ಮಾರ್ಗವಾಗಿ ಮಂಗಳೂರಿಗೆ ರಸ್ತೆ ಮೂಲಕ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ:➤ ಸಿಎಂ ಜೊತೆಗೆ ಶಿವಮೊಗ್ಗ ಡಿಸಿ ವಿಡಿಯೋ ಕಾನ್ಫರೆನ್ಸ್, ಬಳಿಕ ದಿಢೀರ್ ಮೀಟಿಂಗ್, ಏನಂದ್ರು ಜಿಲ್ಲಾಧಿಕಾರಿ?