ಶಿವಮೊಗ್ಗ ಲೈವ್
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ನ. 27ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಸಭೆ ಹಾಗೂ ಕಾರ್ಯ ಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ 11.30ಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಿದ್ದಾರೆ. ಮಧ್ಯಾಹ್ನ 2.30ರಿಂದ ನಾನಾ ಧಾರ್ಮಿಕ ಸ್ಥಳ ಹಾಗೂ ಸಂಜೆ 4ಕ್ಕೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ವಿವಿಧ ಸಮುದಾಯಗಳಿಂದ ಸನ್ಮಾನ ಸ್ವೀಕರಿಸಲಿದ್ದಾರೆ. ಸಂಜೆ 6 ಗಂಟೆಗೆ ಡಿವಿಎಸ್ ಅಮೃತ ಮಹೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 8ಕ್ಕೆ ಸೋಮಿನಕೊಪ್ಪದ ಜಾಮೀಯ ಮಸೀದಿಯಿಂದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ 9 ಗಂಟೆಗೆ ಹೊಸಪೇಟೆಗೆ ಪ್ರಯಾಣ ಬೆಳೆಸಲಿದ್ದಾರೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: