18 ದಿನದ ಹಿಂದೆ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಶಿವಮೊಗ್ಗದಲ್ಲಿ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಕರ್ತವ್ಯ ನಿರತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) 8ನೇ ಪಡೆಯ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಈರಣ್ಣ ಗುಡಾದಾರ್ (26) ಮೃತ ದುರ್ದೈವಿ. 7 ವರ್ಷಗಳಿಂದ ಶಿವಮೊಗ್ಗದ ಮಾಚೇನಹಳ್ಳಿಯಲ್ಲಿರುವ ಕೆಎಸ್‌ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 18 ದಿನಗಳ ಹಿಂದೆಯಷ್ಟೇ ಇವರ ವಿವಾಹ ನೆರವೇರಿತ್ತು.

Constable-Eeranna-Gudadar-breathed-last.

ಬುಧವಾರ ಕರ್ತವ್ಯದಲ್ಲಿದ್ದ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಈರಣ್ಣ ಗುಡಾದಾರ್‌ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!