ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರಾದ್ಯಂತ ಬಿಗಿ ಪೊಲೀಸ್ (police) ಬಂದೋಬಸ್ತ್ ಕೈಗೊಳ್ಳಲಾಗಿದೆ. ಗಣಪತಿ ಸಾಗುವ ಮಾರ್ಗದುದ್ದಕ್ಕು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗಣಪತಿ ಬಂದೋಬಸ್ತ್ಗೆ 2500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಖುದ್ದು ಬಂದೋಬಸ್ತ್ (Bandobasth) ಉಸ್ತುವಾರಿ ವಹಿಸಿಕೊಂಡಿದ್ದಾರೆ. ಗಾಂಧಿ ಬಜಾರ್ ಮುಖ್ಯ ರಸ್ತೆಯಲ್ಲಿ ಸಾಗಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಬಂದೋಬಸ್ತ್ ಕುರಿತು ಪರಿಶೀಲಿಸಿದರು.
ಇದನ್ನೂ ಓದಿ- ಮಧ್ಯರಾತ್ರಿಯಲ್ಲು ಗಾಂಧಿ ಬಜಾರ್ ಮುಂದೆ ಜಮಾಯಿಸಿದ್ದರು ಸಾವಿರಾರು ಜನ
ಅಲ್ಲಲ್ಲಿ ವಾಚ್ ಟವರ್
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕು ವಾಚ್ ಟವರ್ಗಳನ್ನು ನಿರ್ಮಿಸಲಾಗಿದೆ. ಈ ವಾಚ್ ಟವರ್ಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದಲೇ ವಿಡಿಯೋ ಚಿತ್ರೀಕರಣ ಮಾಡಿಸಲಾಗುತ್ತಿದೆ. ಇನ್ನು, ಕಟ್ಟಡಗಳ ಮೇಲೆ, ರಸ್ತೆಯ ಎರಡು ಬದಿಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಸ್ವಯಂ ಸೇವಕರು
ಬಂದೋಬಸ್ತ್ಗೆ ಸ್ವಯಂ ಸೇವಕರನ್ನು ಕೂಡ ನಿಯೋಜನೆ ಮಾಡಲಾಗಿದೆ. ಸುಮಾರು 400 ಮಂದಿ ಸ್ವಯಂ ಸೇವಕರು ಬಂದೋಬಸ್ತ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ (Police Department) ವತಿಯಿಂದ ನೀಲಿ ಬಣ್ಣದ ರಿಫ್ಲೆಕ್ಟರ್ ಧಿರಿಸು ನೀಡಲಾಗಿದೆ. ಪ್ರತ್ಯೇಕ ಐಡಿ ಕಾರ್ಡ್ ಕೂಡ ಒದಗಿಸಲಾಗಿದೆ.