ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದಲ್ಲಿಗುಡುಗು ಹಾಗೂ ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ (heavy rain). ಕಳೆದ ಕೆಲವು ದಿನಗಳಿಂದ ಬಿಸಿಲ ಝಳದಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ ಮತ್ತೆ ತಂಪೆರೆದಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?
ಶಿವಮೊಗ್ಗ ನಗರದಲ್ಲಿ ಸಂಜೆಯಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆಯ ಬಳಿಕ ಮಳೆ ಗುಡುಗು, ಮಿಂಚು ಸಹಿತ ಜೋರು ಮಳೆ ಆರಂಭವಾಯಿತು. ದಿಢೀರ್ ಮಳೆಯಿಂದಾಗಿ ವಾಹನ ಸವಾರರು, ಸಂಜೆ ವೇಳೆ ಸಿಟಿಗೆ ಬಂದವರು ಸಂಕಷ್ಟಕ್ಕೆ ಸಿಲುಕಿದರು. ಅಲ್ಲಲ್ಲಿ ಕಟ್ಟಡಗಳ ಮಳೆಯಿಂದ ರಕ್ಷಣೆ ಪಡೆಯುವಂತಾಗಿದೆ.

ಇನ್ನು, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಈ ಅಕಾಲಿಕ ಮಳೆಯಿಂದಾಗಿ ಜನಸಾಮಾನ್ಯರಲ್ಲಿ ಒಂದೆಡೆ ಸಂತಸ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ರೈತರಲ್ಲಿ ಆತಂಕ ಮೂಡಿಸಿದೆ. ಅಡಿಕೆ ಬೆಳೆಗಾರರು ಮತ್ತು ಮಾವು ಬೆಳೆಗಾರರು ಮಳೆಯ ಅಬ್ಬರಕ್ಕೆ ಹಿಂಗಾರ ಹಾಗೂ ಮಾವು ಉದುರುವ ಭೀತಿಯಲ್ಲಿದ್ದಾರೆ.

LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು














