ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ: ನಗರದಲ್ಲಿಗುಡುಗು ಹಾಗೂ ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ (heavy rain). ಕಳೆದ ಕೆಲವು ದಿನಗಳಿಂದ ಬಿಸಿಲ ಝಳದಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ ಮತ್ತೆ ತಂಪೆರೆದಿದ್ದಾನೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

Rain-in-Shimoga-city-night.

ಶಿವಮೊಗ್ಗ ನಗರದಲ್ಲಿ ಸಂಜೆಯಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆಯ ಬಳಿಕ ಮಳೆ ಗುಡುಗು, ಮಿಂಚು ಸಹಿತ ಜೋರು ಮಳೆ ಆರಂಭವಾಯಿತು. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು, ಸಂಜೆ ವೇಳೆ ಸಿಟಿಗೆ ಬಂದವರು ಸಂಕಷ್ಟಕ್ಕೆ ಸಿಲುಕಿದರು. ಅಲ್ಲಲ್ಲಿ ಕಟ್ಟಡಗಳ ಮಳೆಯಿಂದ ರಕ್ಷಣೆ ಪಡೆಯುವಂತಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

Rain-in-Shimoga-city-night.

ಇನ್ನು, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಈ ಅಕಾಲಿಕ ಮಳೆಯಿಂದಾಗಿ ಜನಸಾಮಾನ್ಯರಲ್ಲಿ ಒಂದೆಡೆ ಸಂತಸ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ರೈತರಲ್ಲಿ ಆತಂಕ ಮೂಡಿಸಿದೆ. ಅಡಿಕೆ ಬೆಳೆಗಾರರು ಮತ್ತು ಮಾವು ಬೆಳೆಗಾರರು ಮಳೆಯ ಅಬ್ಬರಕ್ಕೆ ಹಿಂಗಾರ ಹಾಗೂ ಮಾವು ಉದುರುವ ಭೀತಿಯಲ್ಲಿದ್ದಾರೆ.

Sunrise Facility Services, Sri sai Trust Shimoga

Leave a Comment