ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 MAY 2023
SHIMOGA : ನಗರದಲ್ಲಿ ಸಂಜೆ ವೇಳೆಗೆ ಜೋರು ಗಾಳಿ (Wind) ಬೀಸಿದ್ದು, ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ವೇಳೆಗೆ ಜೋರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಗಾಳಿ ಬೀಸಿದ ರಭಸಕ್ಕೆ ಮರಗಳು ಬುಡ ಮೇಲಾಗಿವೆ. ವಿದ್ಯುತ್ ಕಂಬಗಳು ರಸ್ತೆಗುರುಳಿವೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಂಜೆ ವೇಳೆಗೆ ಶಿವಮೊಗ್ಗ ನಗರ ಮತ್ತು ಸುತ್ತಮುತ್ತ ಭಾರಿ ಗಾಳಿ (Wind) ಬೀಸಿತು. ಇದರಿಂದ ಅಲ್ಲಲ್ಲಿ ರೆಂಬೆ, ಕೊಂಬೆಗಳು ರಸ್ತೆಗಳ ಮೇಲೆ ಬಿದ್ದಿವೆ. ಮತ್ತೂರು ಮಳಲಕೊಪ್ಪ ಗ್ರಾಮಗಳ ನಡುವೆ ರಸ್ತೆಯಲ್ಲಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಗಳು ಬುಡ ಮೇಲಾಗಿವೆ. ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಎರಡು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿವೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ ಅದೃಷ್ಟವಶಾತ್ ರಸ್ತೆಯಲ್ಲಿ ಯಾರೂ ಸಾಗುತ್ತಿರಲಿಲ್ಲ. ಇದರಿಂದ ಯಾರಿಗೂ ಹಾನಿಯಾಗಿಲ್ಲ. ಸ್ಥಳಿಯರು ರಸ್ತೆಯನ್ನು ಬ್ಲಾಕ್ ಮಾಡಿ, ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಗೌರಿ ಇನ್ನಿಲ್ಲ, ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಗೌರವ ನಮನ, ಯಾರಿದು ಗೌರಿ? ಈಕೆಯ ಹಿರಿಮೆ ಏನು?
ಇನ್ನು, ಸಂಜೆ ವೇಳೆಗೆ ದಟ್ಟ ಮೋಡ ಆವರಿಸಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿ ಜೋರು ಮಳೆಯಾಗುವ ಸಾಧ್ಯತೆ ಇದೆ.